ಬಾಗಲಕೋಟೆ: ಬಾಗಲಕೋಟೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಗುಪ್ತಚರ ಇಲಾಖೆ ಮಾಹಿತಿಯಿಂದ ಹೆದರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ದಿನ ಬಾಗಲಕೋಟೆಯಲ್ಲಿದ್ದು, ಪ್ರಚಾರ ಕಾರ್ಯ ಕೈಗೊಳ್ಳುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಚಾರಕ್ಕೆ ಬರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾಂಗ್ರೆಸ್ ಮುಖಂಡರೇ ಬೆಂಬಲಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಗೆಲ್ಲಿಸುವುದಕ್ಕೆ ಯಾರೇ ಸಹಕಾರ ನೀಡಿದರೂ ಸ್ವಾಗತ ಮಾಡುತ್ತೇನೆ ಎಂದರು.






















