SK Home Ad
Home ನಮ್ಮ ಜಿಲ್ಲೆ ಬಾಗಲಕೋಟೆ ಸಿಡಿಲು ಬಡಿದು ಇಬ್ಬರು ಸಾವು, ನಾಲ್ವರಿಗೆ ಗಾಯ

ಸಿಡಿಲು ಬಡಿದು ಇಬ್ಬರು ಸಾವು, ನಾಲ್ವರಿಗೆ ಗಾಯ

0
19

ಬಾಗಲಕೋಟೆ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ಮೃತಪಟ್ಟರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುನಗುಂದ ತಾಲೂಕಿನ ಐಹೊಳೆಯಲ್ಲಿ ನಡೆದಿದೆ.

ಭರಮಪ್ಪ ಯಲ್ಲಪ್ಪ ಕಂಡೇಕರ್ (21), ರಾಮವ್ವ ದ್ಯಾಮಪ್ಪ ಹೋಳಗಿ (64) ಮೃತ ದುರ್ದೈವಿಗಳು. ಮೃತ ಭರಮಪ್ಪ ಕುಷ್ಟಗಿ ತಾಲೂಕಿನ ಕಾಟಾಪುರ ಗ್ರಾಮದ ನಿವಾಸಿಯಾಗಿದ್ದು, ರಾಮವ್ವ ಐಹೊಳೆ ಗ್ರಾಮದ ಮಹಿಳೆ.

ಸೂರ್ಯಕಾಂತಿ ಬೆಳೆ ರಾಶಿ ಮಾಡುವ ವೇಳೆ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನು ನವನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.