Home ನಮ್ಮ ಜಿಲ್ಲೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿಗೆ ಮೋದಿ ಹಸಿರು ನಿಶಾನೆ

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿಗೆ ಮೋದಿ ಹಸಿರು ನಿಶಾನೆ

0

ಬೆಂಗಳೂರು: ಬೆಳಗಾವಿ, ಉತ್ತರ ಕರ್ನಾಟಕ ಭಾಗದ ಬಹು ದಿನದ ಬೇಡಿಕೆಯಾಗಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಕರ್ನಾಟಕದ 11ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರು-ಬೆಳಗಾವಿ ನಡುವೆ ಸಂಚಾರವನ್ನು ನಡೆಸುತ್ತದೆ.

ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಕೆಎಸ್ಆರ್ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸೇವೆಗೆ ಬೆಂಗಳೂರು ನಗರದ ಮೆಜೆಸ್ಟಿಕ್ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ) ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದರು.

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲು ಸೇವೆಗೆ ಹಸಿರು ನಿಶಾನೆ ತೋರಿಸಿದ್ದು, ಭಾನುವಾರ ರೈಲು ಉದ್ಘಾಟನಾರ್ಥ ಸಂಚಾರ ನಡೆಸಿದೆ. ಆಗಸ್ಟ್ 11ರ ಸೋಮವಾರದಿಂದ ವಾರದಲ್ಲಿ 6 ದಿನ ರೈಲು ಉಭಯ ನಗರಗಳ ನಡುವೆ ಸಂಚಾರವನ್ನು ನಡೆಸಲಿದೆ.

ರೈಲು ಸಂಖ್ಯೆ 26751/ 26752 ಬೆಂಗಳೂರು-ಬೆಳಗಾವಿ ನಡುವೆ ಸಂಚಾರ ನಡೆಸಲಿದೆ. ವಂದೇ ಭಾರತ್‌ ರೈಲು ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50ಕ್ಕೆ ಆಗಮಿಸಲಿದೆ. ಬೆಂಗಳೂರಿನಿಂದ ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ-ಬೆಂಗಳೂರು ವಂದೇ ಭಾರತ್‌ ಮಾತ್ರವಲ್ಲ ಮೋದಿ ಭಾನುವಾರ ಅಮೃತ್‍ಸರ್‌-ಶ್ರೀಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್ಪುರ-ಪುಣೆ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು.

ಕರ್ನಾಟಕದ 11ನೇ ವಂದೇ ಭಾರತ್: ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಉತ್ತರ ಕರ್ನಾಟಕ ಭಾಗದ ಬಹುದಿನದ ಕನಸಾಗಿತ್ತು. ಉದ್ಯಾನ ನಗರಿ ಬೆಂಗಳೂರು ಮತ್ತು ಕುಂದಾ ನಗರಿ ಬೆಳಗಾವಿ ನಡುವೆ ಈಗ ಸಂಚಾರ ಸುಲಭವಾಗಲಿದೆ.

ರೈಲು ಸಂಖ್ಯೆ 26751 ಬೆಳಗಾವಿಯಿಂದ ಬೆಳಿಗ್ಗೆ 5.20ಕ್ಕೆ ಹೊರಟು, ಮಧ್ಯಾಹ್ನ 1.50ಕ್ಕೆ ಬೆಂಗಳೂರು ತಲುಪಲಿದೆ. ರೈಲು ಧಾರವಾಡಕ್ಕೆ 7.08/ 7.10, ಹುಬ್ಬಳ್ಳಿ 7.30/ 7.35, ಹಾವೇರಿ 8.35/ 8.37, ದಾವಣಗೆರೆ 9.25/ 9.27, ತುಮಕೂರು 12.15/ 12.17, ಯಶವಂತಪುರ 13.03/ 13.05 ಆಗಮನ/ ನಿರ್ಗಮನ. ಬೆಂಗಳೂರು ನಗರದ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಮಧ್ಯಾಹ್ನ 1.50ಕ್ಕೆ ತಲುಪಲಿದೆ.

ಕೆಎಸ್‌ಆರ್ ಬೆಂಗಳೂರು ಬೆಳಗಾವಿ ನಡುವೆ ರೈಲು ಸಂಖ್ಯೆ 26752 ಸಂಚಾರ ನಡೆಸಲಿದೆ. ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ಮಧ್ಯಾಹ್ನ 02.20ಕ್ಕೆ ಹೊರಡಲಿದ್ದು. ಯಶವಂತಪುರ 02.28/ 02.30, ತುಮಕೂರು 03.03/ 03.05, ದಾವಣಗೆರೆ 05.48/ 05.50, ಹಾವೇರಿ 06.48/ 06.50, ಹುಬ್ಬಳ್ಳಿ 08/08.05, ಧಾರವಾಡ 08.25/ 08.27 ಆಗಮನ/ ನಿರ್ಗಮನ. ಬೆಳಗಾವಿಗೆ ರಾತ್ರಿ 10.40ಕ್ಕೆ ತಲುಪಲಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version