ಬೆಳ್ಳಂಬೆಳಗ್ಗೆ ಬೆಳಗಾವಿಯಲ್ಲಿ ಗುಂಡಿನ ಸದ್ದು: ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಗುಂಡೇಟು

0
19

ಬೆಳಗಾವಿ: ದರೋಡೆ, ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ ಘಟನೆ ಕಿತ್ತೂರು ಪಟ್ಟಣದ ಹೊರ ವಲಯದಲ್ಲಿ ಶನಿವಾರ ನಸುಕಿನ ಜಾವ ನಡೆದಿದೆ.


ಆರೋಪಿ ರಮೇಶ್ ಕಿಲ್ಲಾರ್ ನನ್ನು ಬೆಳಗಿನ ಜಾವ 6 ಗಂಟೆಗೆ ಆರೋಪಿ ಬಂಧಿಸಲು ಹೋದಾಗ ಘಟನೆ ನಡೆದಿದೆ.
ಪೊಲೀಸ್ ಪೇದೆ ಷರೀಫ್ ದಫೇದಾರ್ ಗೆ ಚಾಕು ಇರಿದು ಪರಾರಿಯಾಗುವ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಪಿಎಸ್‌ಐ ಪ್ರವೀಣ್ ಗೊಂಗೊಳ್ಳಿ ಎಚ್ಚರಿಕೆ ನೀಡಿದರೂ ದಾಳಿ ಮಾಡಿ ತಪ್ಪಿಸಿಕೊಳ್ಳಲು ‌ಪ್ರಯತ್ನ ಹಿನ್ನೆಲೆ ಆರೋಪಿ ಕಾಲಿಗೆ ಗುಂಡೇಟು ನೀಡಿದ್ದಾರೆ.


ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ, ಅಕ್ರಮ ಶಸ್ತ್ರಾಸ್ತ್ರ ಸೇರಿ ಹಲವು ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ ಎನ್ನಲಾಗಿದೆ. ಗಾಯಗೊಂಡ ಆರೋಪಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Previous articleGST ದರ ಕಡಿತ: ಪರಿಹಾರಕ್ಕೆ ಕರ್ನಾಟಕ ಸೇರಿ 8 ರಾಜ್ಯಗಳ ಬೇಡಿಕೆಗಳು
Next articleರಾಮನಗರ: ಹೆಣ್ಣು ಭ್ರೂಣ ಹತ್ಯೆ ದಂಧೆ ಜಿಲ್ಲೆಗೆ ಕಾಲಿಟ್ಟಿದೆಯೇ?

LEAVE A REPLY

Please enter your comment!
Please enter your name here