ಬೆಳಗಾವಿ: ಶಿಂಧಿಕುರಬೇಟ ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷರು ಸೇರಿ 28 ಮಂದಿ ಅನರ್ಹ

0
61

ಬೆಳಗಾವಿ: ಗೋಕಾಕ ತಾಲೂಕಿನ ಶಿಂಧಿಕುರಬೇಟ ಗ್ರಾಮ ಪಂಚಾಯಿತಿಯಲ್ಲಿ ನಡೆದ ನಿಯಮಬಾಹಿರ ಆಸ್ತಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರಕಾರ ಗಂಭೀರ ಕ್ರಮ ಕೈಗೊಂಡಿದೆ. ಅಧ್ಯಕ್ಷೆ, ಉಪಾಧ್ಯಕ್ಷರನ್ನು ಅಧಿಕಾರದಿಂದಲೇ ಕೆಳಗಿಳಿಸಿ, 26 ಮಂದಿ ಸದಸ್ಯರನ್ನೂ ಸೇರಿ ಒಟ್ಟು 28 ಜನರನ್ನು ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದಶರ್ಿ ಉಮಾ ಮಹಾದೇವನ್ ಸಹಿ ಹೊಂದಿದ ಆದೇಶದಲ್ಲಿ ಈ ನಿರ್ಧಾರ ಪ್ರಕಟಗೊಂಡಿದೆ.

ಏನು ಪ್ರಕರಣ?: 2022ರ ಫೆಬ್ರವರಿ 25 ಹಾಗೂ ಮಾರ್ಚ್‌ 25ರಂದು ನಡೆದ ಪಂಚಾಯಿತಿ ಸಾಮಾನ್ಯ ಸಭೆಗಳಲ್ಲಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಸಹಭಾಗಿತ್ವದಲ್ಲಿ ಗ್ರಾಮ ಆಸ್ತಿ ದಾಖಲೆಯನ್ನು ಸರಿಯಾಗಿ ಪರಿಶೀಲಿಸದೇ, ತಪ್ಪಾಗಿ ಅಂಗೀಕರಿಸಲಾಗಿದೆ. ಈ ಮೂಲಕ, ಶಾಂತಾ ನಾಗಪ್ಪ ಪೋತದಾರ ಅವರ ಹೆಸರಿನ ಆಸ್ತಿಯನ್ನು ನಿಯಮಬಾಹಿರವಾಗಿ ರಾಮಚಂದ್ರ ದಾನಪ್ಪ ಪೋತದಾರ ಅವರ ಹೆಸರಿಗೆ ವಗರ್ಾವಣೆ ಮಾಡಲಾಗಿದೆ ಎಂಬ ಆರೋಪ ಸಾಬೀತಾಗಿದೆ.

ಯಾರ ವಿರುದ್ಧ ಕ್ರಮ ?: ಅಧ್ಯಕ್ಷೆ ರೆಣುಕಾ ಈರಪ್ಪಾ ಪಾಟೀಲ, ಉಪಾಧ್ಯಕ್ಷ ಭೀಮಪ್ಪಾ ಯಲ್ಲಪ್ಪಾ ಬರನಾಳಿ ಸ್ಥಾನ ಕಳೆದುಕೊಂಡಿದ್ದು, ಇವರ ಜೊತೆಗೆ ಸದಸ್ಯರಾದ ಫಕೀರಪ್ಪಾ ಭೋವಿ, ಗಜಾನನ ಪಾಟೀಲ, ಶಾಂತವ್ವ ಕೌಜಲಗಿ, ಮಾರುತಿ ಜಾಧವ, ಅಮೃತ ಕಾಳ್ಯಾಗೋಳ, ರುಕ್ಸಾರ ಜಮಾದಾರ, ರೂಪಾ ಕಂಬಾರ, ಶಾಂತಮ್ಮ ಭೋವಿ, ಸುರೇಖಾ ಪತ್ತಾರ, ಇಬ್ರಾಹಿಮ ಮುಲ್ಲಾ, ಚಾಂದಬಿ ಸೌದಾಗರ, ರಾಮಪ್ಪ ಬೆಳಗಲಿ, ಶಮಶಾದ ಸೌದಾಗರ, ಮಂಜುಳಾ ಕರೋಶಿ, ಮಂಜುನಾಥ ಗುಡಕ್ಷೇತ್ರ, ರಾಮಕೃಷ್ಣ ಗಾಡಿವಡ್ಡರ, ಸುಮಿತ್ರಾ ಮಾಯ, ಪಾರ್ವತಿ ಜೊತೆನ್ನವರ, ಅಡಿವೆಪ್ಪಾ ಬೆಕ್ಕಿನ್ನವರ, ಸಿದ್ದಪ್ಪ ಕಟ್ಟಿಕಾರ, ಬಸಲಿಂಗಪ್ಪ ಭಜಂತ್ರಿ, ಲಕ್ಷ್ಮೀಬಾಯಿ ಸೂರ್ಯವಂಶ, ನಿಸ್ಸಾರಹ್ಮದ ಜಕಾತಿ, ಅಶೋಕ ಮೇತ್ರಿ, ಸುರೇಖಾ ಗಾಡಿವಡ್ಡರ ಹಾಗೂ ಶ್ರೀಕಾಂತ ಕಾಳ್ಯಾಗೋಳ ಇವರನ್ನೂ ಸದಸ್ಯ ಸ್ಥಾನದಿಂದ ತೆಗೆದುಹಾಕಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಕಲಂ 48(4) ಹಾಗೂ 48(5) ಅಡಿಯಲ್ಲಿ ಅಧ್ಯಕ್ಷೆ, ಉಪಾಧ್ಯಕ್ಷರನ್ನು ತೆಗೆದುಹಾಕಲಾಗಿದ್ದು, ಕಲಂ 43(ಎ)(2) ಅಡಿಯಲ್ಲಿ ಎಲ್ಲಾ 28 ಮಂದಿಗೂ ಆರು ವರ್ಷಗಳ ಅನರ್ಹತೆ ವಿಧಿಸಲಾಗಿದೆ. ಈ ನಿರ್ಧಾರದಿಂದ ಶಿಂಧಿಕುರಬೇಟ ಗ್ರಾಮ ಪಂಚಾಯಿತಿ ಸಂಪೂರ್ಣವಾಗಿ ಕಾರ್ಯನಿರ್ವಹಣೆಗೆ ಅಸಮರ್ಥವಾಗಿದ್ದು, ಮುಂದಿನ ದಿನಗಳಲ್ಲಿ ಆಡಳಿತಾತ್ಮಕ ವ್ಯವಸ್ಥೆ ಹೇಗೆ ರೂಪುಗೊಳ್ಳಲಿದೆ ಎಂಬ ಕುತೂಹಲ ಹೆಚ್ಚಿದೆ

ಯಾರ ವಿರುದ್ಧ ಕ್ರಮ ?: ಅಧ್ಯಕ್ಷೆ ರೆಣುಕಾ ಈರಪ್ಪಾ ಪಾಟೀಲ, ಉಪಾಧ್ಯಕ್ಷ ಭೀಮಪ್ಪಾ ಯಲ್ಲಪ್ಪಾ ಬರನಾಳಿ ಸ್ಥಾನ ಕಳೆದುಕೊಂಡಿದ್ದು, ಇವರ ಜೊತೆಗೆ ಸದಸ್ಯರಾದ ಫಕೀರಪ್ಪಾ ಭೋವಿ, ಗಜಾನನ ಪಾಟೀಲ, ಶಾಂತವ್ವ ಕೌಜಲಗಿ, ಮಾರುತಿ ಜಾಧವ, ಅಮೃತ ಕಾಳ್ಯಾಗೋಳ, ರುಕ್ಸಾರ ಜಮಾದಾರ, ರೂಪಾ ಕಂಬಾರ, ಶಾಂತಮ್ಮ ಭೋವಿ, ಸುರೇಖಾ ಪತ್ತಾರ, ಇಬ್ರಾಹಿಮ ಮುಲ್ಲಾ, ಚಾಂದಬಿ ಸೌದಾಗರ, ರಾಮಪ್ಪ ಬೆಳಗಲಿ, ಶಮಶಾದ ಸೌದಾಗರ, ಮಂಜುಳಾ ಕರೋಶಿ, ಮಂಜುನಾಥ ಗುಡಕ್ಷೇತ್ರ, ರಾಮಕೃಷ್ಣ ಗಾಡಿವಡ್ಡರ, ಸುಮಿತ್ರಾ ಮಾಯ, ಪಾರ್ವತಿ ಜೊತೆನ್ನವರ, ಅಡಿವೆಪ್ಪಾ ಬೆಕ್ಕಿನ್ನವರ, ಸಿದ್ದಪ್ಪ ಕಟ್ಟಿಕಾರ, ಬಸಲಿಂಗಪ್ಪ ಭಜಂತ್ರಿ, ಲಕ್ಷ್ಮೀಬಾಯಿ ಸೂರ್ಯವಂಶ, ನಿಸ್ಸಾರಹ್ಮದ ಜಕಾತಿ, ಅಶೋಕ ಮೇತ್ರಿ, ಸುರೇಖಾ ಗಾಡಿವಡ್ಡರ ಹಾಗೂ ಶ್ರೀಕಾಂತ ಕಾಳ್ಯಾಗೋಳ ಇವರನ್ನೂ ಸದಸ್ಯ ಸ್ಥಾನದಿಂದ ತೆಗೆದುಹಾಕಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಕಲಂ 48(4) ಹಾಗೂ 48(5) ಅಡಿಯಲ್ಲಿ ಅಧ್ಯಕ್ಷೆ, ಉಪಾಧ್ಯಕ್ಷರನ್ನು ತೆಗೆದುಹಾಕಲಾಗಿದ್ದು, ಕಲಂ 43(ಎ)(2) ಅಡಿಯಲ್ಲಿ ಎಲ್ಲಾ 28 ಮಂದಿಗೂ ಆರು ವರ್ಷಗಳ ಅನರ್ಹತೆ ವಿಧಿಸಲಾಗಿದೆ. ಈ ನಿರ್ಧಾರದಿಂದ ಶಿಂಧಿಕುರಬೇಟ ಗ್ರಾಮ ಪಂಚಾಯಿತಿ ಸಂಪೂರ್ಣವಾಗಿ ಕಾರ್ಯನಿರ್ವಹಣೆಗೆ ಅಸಮರ್ಥವಾಗಿದ್ದು, ಮುಂದಿನ ದಿನಗಳಲ್ಲಿ ಆಡಳಿತಾತ್ಮಕ ವ್ಯವಸ್ಥೆ ಹೇಗೆ ರೂಪುಗೊಳ್ಳಲಿದೆ ಎಂಬ ಕುತೂಹಲ ಹೆಚ್ಚಿದೆ.

Previous articleಬಾಗಲಕೋಟೆ:‌ ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ, ಮೂವರಿಗೆ ಜೈಲು ಶಿಕ್ಷೆ…!
Next articleಚಾಮರಾಜನಗರ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

LEAVE A REPLY

Please enter your comment!
Please enter your name here