ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ದೊಡ್ಡ ಪ್ರಮಾಣದ ಹಣದ ಆಮಿಷ ಒಡ್ಡಿದ್ದರಿಂದ ಕೆಲವರು ಅಡ್ಡ ಮತದಾನ ಮಾಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆ. ಈ ಥರದ ಮುಖ್ಯಮಂತ್ರಿ ಇದ್ದಾಗ ಬಹಳ ಜಾಗೃತೆಯಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನದ ತನಿಖೆ ನಡೆಸಲು ಪಕ್ಷದ ವತಿಯಿಂದ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ. ಈ ಥರದ ಮುಖ್ಯಮಂತ್ರಿ ಇದ್ದಾಗ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.
ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿರುವ ಪ್ರಭಾಕರ ಕೋರೆಯವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಭಾಕರ ಕೋರೆಯವರು ಕೆಎಲ್‌ಇ ಸಂಸ್ಥೆಯ ಮೂಲಕ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ನೋಡಿ ಈ ಗೌರವ ನೀಡಲಾಗಿದೆ. ಅವರಿಗೆ ಅಭಿನಂದನೆಗಳು ಎಂದು ಹೇಳಿದರು.





















