Home Advertisement
Home ನಮ್ಮ ಜಿಲ್ಲೆ ಬೆಳಗಾವಿ ಬೆಳಗಾವಿಯಲ್ಲಿ ಅಕ್ರಮ ಕಟ್ಟಡದ ವಿರುದ್ಧ ಜೆಸಿಬಿ ಕಾರ್ಯಾಚರಣೆ

ಬೆಳಗಾವಿಯಲ್ಲಿ ಅಕ್ರಮ ಕಟ್ಟಡದ ವಿರುದ್ಧ ಜೆಸಿಬಿ ಕಾರ್ಯಾಚರಣೆ

0
85

ಬೆಳಗಾವಿ: ನಗರದ ಮಾರುತಿ ಗಲ್ಲಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಲಾಗಿದೆ ಎಂದು ಗುರುತಿಸಲಾದ ನಾಲ್ಕಂತಸ್ತಿನ ಕಟ್ಟಡದ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ಜೆಸಿಬಿಗಳ ಮೂಲಕ ಭಾಗಶಃ ತೆರವು ಕಾರ್ಯಾಚರಣೆ ನಡೆಸಿದರು. ನಗರದ ಹೃದಯಭಾಗದಲ್ಲೇ ನಡೆದ ಈ ಕ್ರಮ ಸಾರ್ವಜನಿಕರಲ್ಲಿ ಕುತೂಹಲಕ್ಕೆ ಕಾರಣವಾಯಿತು.

ಈ ಕಾರ್ಯಾಚರಣೆ ಅಕ್ರಮ ಕಟ್ಟಡಗಳ ವಿರುದ್ಧ ಪಾಲಿಕೆ ಕಠಿಣ ಕ್ರಮ ಕೈಗೊಳ್ಳುತ್ತಿದೆ ಎಂಬ ಸಂದೇಶ ನೀಡಿದಂತಾಗಿದೆ. ಆದರೆ ಕಟ್ಟಡದ ಬಾಡಿಗೆದಾರ ಯುನುಸ್ ಜಮಾದಾರ್ ಯಾವುದೇ ಪೂರ್ವ ನೋಟಿಸ್ ನೀಡದೇ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಗಡಿಯಲ್ಲಿದ್ದ ವಸ್ತುಗಳನ್ನು ಹೊರತೆಗೆದುಕೊಳ್ಳಲು ಸಮಯ ಕೊಡದೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎಂದು ಅವರು ದೂರಿದ್ದಾರೆ.

ಇದರ ಜೊತೆಗೆ ಕಟ್ಟಡಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆಗಳ ಬಳಕೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಅನುಮತಿ ಪ್ರಕ್ರಿಯೆಯಲ್ಲಿ ನಿರ್ಲಕ್ಷ್ಯವಿತ್ತೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಮಹಾನಗರ ಪಾಲಿಕೆಯ ಅಧಿಕೃತ ಪ್ರತಿಕ್ರಿಯೆ ಇನ್ನೂ ಲಭ್ಯವಾಗಿಲ್ಲ.