ಬೆಳಗಾವಿ: ಪೊಲೀಸ್ ಕಮಿಷನರ್ ಹುದ್ದೆ ಬದಲಾವಣೆಗೆ ತೆರೆ – ನಿಕ್ಕಂ ಪ್ರಕಾಶ್ ಅಧಿಕಾರ ಸ್ವೀಕಾರ

ಬೆಳಗಾವಿ ನಗರ ಪೊಲೀಸ್ ಆಯುಕ್ತರ ಹುದ್ದೆಗೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಚರ್ಚೆ ಹಾಗೂ ಗೊಂದಲಕ್ಕೆ ಇದೀಗ ತೆರೆ ಬಿದ್ದಿದೆ. ರಾಜ್ಯ ಸರ್ಕಾರ ಇತ್ತೀಚೆಗೆ ನಡೆಸಿದ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿದ್ದ ಭೂಷಣ್ ಗುಲಾಬ್ರಾವ್ ಬೋರಸೆ ಅವರನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ 2012ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ನಿಕ್ಕಂ ಪ್ರಕಾಶ್ ಅಮೃತ್ ಅವರನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿತ್ತು. ಸರ್ಕಾರದ ಆದೇಶ … Continue reading ಬೆಳಗಾವಿ: ಪೊಲೀಸ್ ಕಮಿಷನರ್ ಹುದ್ದೆ ಬದಲಾವಣೆಗೆ ತೆರೆ – ನಿಕ್ಕಂ ಪ್ರಕಾಶ್ ಅಧಿಕಾರ ಸ್ವೀಕಾರ