ಬೆಳಗಾವಿ: ಕಬ್ಬಿನ ದರ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಅ. 31ರಂದು ಕರೆ ನೀಡಿರುವ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಜಿಲ್ಲಾಡಳಿತ ನಿಷೇಧ ಹೇರಿದೆ.
ಬಿಎನ್‌ಎಸ್‌ಎಸ್-2023ರ ಕಲಂ 163ರಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಹೆದ್ದಾರಿ-48 ಸೇರಿದಂತೆ ಜಿಲ್ಲೆಯ ಎಲ್ಲ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ, ವಾಹನ ತಡೆ ಹಾಗೂ ಟೋಲ್‌ಪ್ಲಾಜಾಗಳ ಕಾರ್ಯಾಚರಣೆಗೆ ಅಡ್ಡಿಪಡಿಸುವುದನ್ನು ನಿಷೇಧಿಸಿದ್ದಾರೆ.
ಸಾರ್ವಜನಿಕ ಸಂಚಾರ ಮತ್ತು ಸರಕು ಸಾಗಣೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದು, ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡದಂತೆಯೂ ಎಚ್ಚರಿಕೆ ನೀಡಿದ್ದಾರೆ.






















