Home ನಮ್ಮ ಜಿಲ್ಲೆ ಬೆಳಗಾವಿ ಸುವರ್ಣಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ಪೊಲೀಸರಿಂದ ಬ್ರೇಕ್

ಸುವರ್ಣಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ಪೊಲೀಸರಿಂದ ಬ್ರೇಕ್

0
30

ಬೆಳಗಾವಿ: ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಸಿಡಿದೆದ್ದ ಬಿಜೆಪಿಗರು ಇಂದು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಯತ್ನ ನಡೆಸಿದರು.

ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಿಂದ ಮೆರವಣಿಗೆ ಮೂಲಕ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿಯವರನ್ನು ಹಲಗಾ ಬಳಿ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡರು.

ಮೆರವಣಿಗೆಯುದ್ದಕ್ಕೂ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಿದ್ದ ಪ್ರತಿಭಟನಾಕಾರರನ್ನು ಹಲಗಾ ಬಳಿ ತಡೆದು ಎಲ್ಲರನ್ನು ವಶಕ್ಕೆ ಪಡೆದುಕೊಂಡರು.

ಇದಕ್ಕೂ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ, ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಅಭಯ ಪಾಟೀಲ, ಮಹಾಂತೇಶ ಕವಟಗಿಮಠ, ಹಣಮಂತ ನಿರಾಣಿ, ಅನಿಲ ಬೆನಕೆ, ಮಾಜಿ ಶಾಸಕ ಮತ್ತು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ, ಮಾಜಿ ಶಾಸಕ ಸಂಜಯ ಪಾಟೀಲ ಸೇರಿದಂತೆ ಹಲವಾರು ಜನ ಸೌಧಕ್ಕೆ ಮುತ್ತಿಗೆ ಹಾಕುವ ಯತ್ನ ನಡೆಸಿದರು.