ಬೆಳಗಾವಿ: ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಇವರು ಗುರುವಾರ ಬೆಳಗಾವಿ ಜಿಲ್ಲಾಧಿಕಾರಿಗಳಾದ ಮಹಮ್ಮದ್ ರೋಷನ್ ಇವರೊಡನೆ ಸವದತ್ತಿಯ ರೇಣುಕಾ ಯಲ್ಲಮ್ಮದೇವಿಯ ದೇವಸ್ಥಾನದಲ್ಲಿ ಕೇಂದ್ರ ಸರಕಾರದ ಅನುದಾನದಡಿ ಕೈಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ಸಭಾ ಭವನದಲ್ಲಿ ಸಭೆ ನಡೆಸಿ, ಚರ್ಚಿಸಿದರು.
ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಪಡಿಸಲು ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆ ಸಚಿವಾಲಯದಿಂದ Capital expenditure, under Part-III (Development of Iconic Tourist Centre to Global Scale) of the Scheme for Special Assistance to State for Capital Investment-2024-25) ಯೋಜನೆಯ ಅನುದಾನದಲ್ಲಿ ರೂ. 100 ಕೋಟಿ ಹಾಗೂ ಪ್ರಸಾದ ಯೋಜನೆಯಲ್ಲಿ 18 ಕೋಟಿ ರೂ. ಹೀಗೆ ಒಟ್ಟು 118 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ನಡೆಸಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸುದೀರ್ಘವಾದ ಮಾಹಿತಿಯನ್ನು ಸಂಸದರು ಜಿಲ್ಲಾಧಿಕಾರಿಗಳಿಂದ ಪಡೆಯುತ್ತಾ, ದೇವಸ್ಥಾನದ ಭಕ್ತಾಧಿಗಳ ಅನಕೂಲಕ್ಕಾಗಿ ನಿರ್ಧರಿತ ಎಲ್ಲ ಕಾಮಗಾರಿಗಳನ್ನು ಆದಷ್ಟು ಬೇಗನೆ ಪ್ರಾರಂಭಿಸಿ, ಪೂರ್ಣಗೊಳಿಸುವ ಬಗ್ಗೆ ಸಂಸದರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಈ ನಿಟ್ಟಿನಲ್ಲಿ ಸದ್ಯ 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಶೀಘ್ರದಲ್ಲಿ ಕೈಕೊಳ್ಳಲಾಗುವ ಬಗ್ಗೆ ಜಿಲ್ಲಾಧಿಕಾರಿಗಳು ಲೋಕಸಭಾ ಸದಸ್ಯರು ಜಗದೀಶ ಶೆಟ್ಟರ ಇವರಿಗೆ ತಿಳಿಸಿದರು.