ಬೆಳಗಾವಿ: ಡಿಸಿಎಂ ಡಿ.ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಬೆಳಗಾವಿಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಮಂಜುನಾಥ್ ಬೈರ್ನಟ್ಟಿ (30) ಮೃತಪಟ್ಟ ದುರ್ದೈವಿಯೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಇಬ್ಬರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಅಂದ್ಲೆ ಜಗದೀಶ್ವರಿಯ ಮೊರೆ ಹೋದ ಡಿಸಿಎಂ ಡಿ.ಕೆ. ಶಿವಕುಮಾರ್
ಯಲ್ಲಮ್ಮನ ದೇವಸ್ಥಾನದಿಂದ ಮರಳುವಾಗ ಅಪಘಾತ: ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನಕ್ಕೆ ತೆರಳಿ ರಾಜೇಂದ್ರ ಪ್ರಸಾದ್ ವಿಶೇಷ ಪೂಜೆ ಸಲ್ಲಿಸಿದ್ದರು. ಬಳಿಕ ಕಾರಿನಲ್ಲಿ ಮರಳುವಾಗ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.























