SK Home Ad
Home ನಮ್ಮ ಜಿಲ್ಲೆ ಬೆಳಗಾವಿ ಬೆಳಗಾವಿಯಲ್ಲಿ ಹೆರಾಯಿನ್‌ ದಂಧೆ ಬಯಲು: ₹2.15 ಲಕ್ಷ ಮೌಲ್ಯದ ವಸ್ತು ಜಪ್ತಿ

ಬೆಳಗಾವಿಯಲ್ಲಿ ಹೆರಾಯಿನ್‌ ದಂಧೆ ಬಯಲು: ₹2.15 ಲಕ್ಷ ಮೌಲ್ಯದ ವಸ್ತು ಜಪ್ತಿ

0
28

ಬೆಳಗಾವಿ: ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತನಿಂದ ₹2.15 ಲಕ್ಷ ಮೌಲ್ಯದ ಹೆರಾಯಿನ್ ಸೇರಿದಂತೆ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಬಂಧಿತನನ್ನು ಸಂದೀಪ ವಿಜಯ ಅನಗೋಳಕರ (27) ಎಂದು ಗುರುತಿಸಲಾಗಿದೆ. ಬೆಳಗಾವಿ ನಗರದ ಬಸವನಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಕಾರ್ಯಾಚರಣೆಯಲ್ಲಿ 10.77 ಗ್ರಾಂ ತೂಕದ ಹೆರಾಯಿನ್, ₹500 ಮೌಲ್ಯದ ನೋಕಿಯಾ ಮೊಬೈಲ್ ಸೇರಿದಂತೆ ಒಟ್ಟು ₹2,15,500 ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಬೆಳಗಾವಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.