ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂಷಣ ಬೋರಸೆ ಭೆಟ್ಟಿ.
ಬೆಳಗಾವಿ: ರಾಜ್ಯೋತ್ಸವ ಮೆರವಣಿಗೆಯ ಸಂಭ್ರಮದಲ್ಲಿ ಕ್ಷಣಾರ್ಧದಲ್ಲಿ ಅರಾಜಕತೆ ಸೃಷ್ಟಿಯಾಗಿ, ಚಾಕು ಇರಿತದಿಂದ ಐದು ಜನ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಬೆಳಗಾವಿಯಲ್ಲಿ ನಡೆದಿದೆ.
ಈ ಘಟನೆಯಿಂದ ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಬೆಳಗಾವಿಯ ನೆಹರೂನಗರ ರೂಪಕ ವಾಹನವು ಸದಾಶಿವನಗರ ಬಳಿ ಬಂದಾಗ ಈ ಘಟನೆ ನಡೆದಿದೆ. ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ.
ಗುರುನಾಥ ವಕ್ಕುಂದ, ಸಚಿನ್ ಕಾಂಬ್ಳೆ, ಲೋಕೇಶ್ ಬೆಟಗೇರಿ, ಮಹೇಶ್ ಹಾಗೂ ವಿನಾಯಕ ಎಂಬುವರು ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂಷಣ ಬೋರಸೆ ಮುಂತಾದವರು ಭೆಟ್ಟಿ ನೀಡಿ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.
ಹೊರಗಿನ ವ್ಯಕ್ತಿಗಳೇ ಬಂದು ಈ ಕೃತ್ಯ ಎಸಗಿದ್ದಾರೆಂದು ಹೇಳಲಾಗುತ್ತಿದೆ
























