ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ನೂತನ ಅಧ್ಯಕ್ಷರ, ಉಪಾಧ್ಯಕ್ಷರ ಆಯ್ಕೆ

0
110

ಬೆಳಗಾವಿ : ಪ್ರತಿಷ್ಠಿತ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಮಹಾವೀರ ನಿಲಜಗಿ ಮತ್ತು ಉಪಾಧ್ಯಕ್ಷರಾಗಿ ಅಜಿತ್ ಮುನ್ನೊಳ್ಳಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿ ಸುಭಾಷ್ ಸಂಪಗಾವಿ ಬುಧವಾರ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸಂಘದ ಸಂಸ್ಥಾಪಕ ದಿ.ಅಪ್ಪಣ್ಣ ಗೌಡ ಮತ್ತು ಮಾಜಿ ಸಚಿವ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.

ಜಿಲ್ಲೆಯಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕತ್ತಿ ಮತ್ತು ಜಾರಕಿಹೊಳಿ ಕುಟುಂಬಗಳ ನಡುವಿನ ಚುನಾವಣೆಯಲ್ಲಿ ಚಿಕ್ಕೋಡಿಯ ಮಾಜಿ ಸಂಸದ ರಮೇಶ ಕತ್ತಿ, ಮಾಜಿ ಸಚಿವ ಎ.ಬಿ. ಪಾಟೀಲ, ಹುಕ್ಕೇರಿ ಶಾಸಕ ನಿಖಿಲ್ ಕತ್ತಿ ಅವರ ನೇತೃತ್ವದ ಸ್ವಾಭಿಮಾನಿ ಪೆನಲ್ 15 ಸ್ಥಾನಗಳನ್ನು ಗೆಲ್ಲುವ ಮೂಲಕ ಸಚಿವ ಸತೀಸ ಜಾರಕಿಹೊಳಿ ಹಾಗೂ ಚಿಕ್ಕೋಡಿಯ ಮಾಜಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ ಅವರ ಪಾಳಯಕ್ಕೆ ಬಹುದೊಡ್ಡ ಹಿನ್ನಡೆ ತಂದಿದ್ದನ್ನು ಇಲ್ಲಿ ನೆನಪಿಸಬಹುದು.

Previous articleನಮ್ಮ ಮೆಟ್ರೋದ ಕೆಂಪು ಮಾರ್ಗ: ಬೆಂಗಳೂರಿನ ಸಂಚಾರಕ್ಕೆ ಹೊಸ ದಿಕ್ಕು!
Next articleKarnataka Government Jobs: 708 ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿವರ

LEAVE A REPLY

Please enter your comment!
Please enter your name here