SK Home Ad
Home ನಮ್ಮ ಜಿಲ್ಲೆ ಬೆಳಗಾವಿ ಶಾಲಾ ಆವರಣದಲ್ಲಿಯೇ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ

ಶಾಲಾ ಆವರಣದಲ್ಲಿಯೇ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ

0
3

ಚಿಕ್ಕೋಡಿ: ಮಕ್ಕಳಿಗೆ ವಿದ್ಯೆ, ಸಂಸ್ಕಾರ ಹಾಗೂ ಸುರಕ್ಷತೆಯ ಪಾಠ ಕಲಿಸಬೇಕಾದ ಸರ್ಕಾರಿ ಶಾಲೆಯ ಆವರಣದಲ್ಲೇ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನವೆಂಬರ್ 24ರಂದು ಸಂಜೆ ಸುಮಾರು 6.30ರ ವೇಳೆಗೆ ಸರ್ಕಾರಿ ಶಾಲೆಯಲ್ಲಿ ಈ ಕೃತ್ಯ ನಡೆದಿದೆ. ನಿಂಗಪ್ಪ ರಾಮಚಂದ್ರ ಕೊಳೆಕರ (38) ಎಂಬಾತನ ವಿರುದ್ಧ ಯುವತಿಯ ತಂದೆ ಅಥಣಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತಕ್ಷಣ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಕರಣದ ಕುರಿತು ಮಾಹಿತಿ ಪಡೆದರು ಹಾಗೂ ತನಿಖೆಯ ಪ್ರಗತಿ ಪರಿಶೀಲಿಸಿದರು.

ವಿಶೇಷ ಚೇತನ ಯುವತಿಯ ಸುರಕ್ಷತೆಯನ್ನೇ ಪ್ರಶ್ನಿಸುವ ಈ ಘಟನೆ, ಮಹಿಳೆಯರ ರಕ್ಷಣೆ ಹಾಗೂ ಸಾರ್ವಜನಿಕ ಸ್ಥಳಗಳ ಭದ್ರತೆಯ ಬಗ್ಗೆ ಆತಂಕ ಮೂಡಿಸಿದೆ. ತಪ್ಪಿತಸ್ಥನಿಗೆ ಕಾನೂನಿನಡಿ ಕಠಿಣ ಶಿಕ್ಷೆಯಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.