ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಕಿಡಿಗೇಡಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ಕ್ಲಬ್ ರೋಡ್‌ನಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32) ಎಂಬುವರೇ ಗಾಯಾಳು ಚಾಲಕ. ಮೃಣಾಲ್ ಕಾರು ಚಾಲಕನಾಗಿದ್ದ ಬಸವಂತ ಕ್ಲಬ್ ರಸ್ತೆಯಲ್ಲಿ ಕಾರಿನಿಂದ ಇಳಿದು ನಿಂತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಆಗಂತುಕರು ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದಿದ್ದಾರೆ. ತೀವ್ರ ರಕ್ತಸ್ರಾವದಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣ ಅಕ್ಕಪಕ್ಕದವರು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಬೆಳಗಾವಿಯ ಕ್ಯಾಂಪ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆಸ್ಪತ್ರೆಗೆ ಮೃಣಾಲ್ ಹೆಬ್ಬಾಳಕರ, ಡಿಸಿಪಿ ನಾರಾಯಣ ಭರಮನಿ, ಎಸಿಪಿ ಹಾಗೂ ಮಾರ್ಕೆಟ್ ಠಾಣಾ ಸಿಪಿಐ ಕಾಲಿಮಿರ್ಜಿಯವರು ಭೇಟಿ ನೀಡಿದರು.























