ಬೆಳಗಾವಿ: ಹೆಲಿಕಾಪ್ಟರ್ ​ಖರೀದಿಸಿದ ಸಚಿವ ಸತೀಶ್ ಜಾರಕಿಹೊಳಿ

0
52

ಬೆಳಗಾವಿ: ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್ ಖರೀದಿಸಿದ್ದಾರೆ.

ಶುಕ್ರವಾರ ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ನೂತನ ಹೆಲಿಕಾಪ್ಟರ್ ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಈ ವಿಷಯ ಹಂಚಿಕೊಂಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರು ಈ ಭಾಗದಲ್ಲಿ ಸ್ವಂತ ಹೆಲಿಕಾಪ್ಟರ್ ಹೊಂದಿರುವ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರರಾಗಿದ್ದಾರೆ.

ರಾಜ್ಯದ್ಯಂತ ಪಕ್ಷ ಸಂಘಟನೆ ಸೇರಿದಂತೆ 2028ರ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಈ ನೂತನ ಹೆಲಿಕಾಪ್ಟರ್ ಅನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನೂತನ ಹೆಲಿಕಾಪ್ಟರ್ ಪರಿಶೀಲಿಸುತ್ತಿರುವ ಸಚಿವರ ವಿಡಿಯೋಗಳು ಈಗ ಸಾಮಾಜೀಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಹೆಲಿಕಾಪ್ಟರ್‌ನ ವಿಶೇಷತೆಗಳೇನು: ಎಲ್ಲಾ ಇತ್ತೀಚಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಅತ್ಯಾಧುನಿಕ ಡಬಲ್ ಇಂಜಿನ್ ಹೊಂದಿರುವ ಹೆಲಿಕಾಪ್ಟರ್ ಇದಾಗಿದ್ದು ಐವರು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ ಅನ್ನು ಸಾಗಿಸುವ ವ್ಯವಸ್ಥೆ ಹೊಂದಿದೆ. ಈ ಹೆಲಿಕಾಪ್ಟರ್ ಎತ್ತರದಿಂದಲೂ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಸಾಮರ್ಥ್ಯ ಹೊಂದಿದೆ. ಚಾಪರ್ ಶಕ್ತಿ ಹೀರಿಕೊಳ್ಳುವ ಆಸನಗಳನ್ನು ಹೊಂದಿದೆ. ಇದು ಅಪಘಾತದ ಸಂದರ್ಭದಲ್ಲಿ ಅದರ ಪ್ರಯಾಣಿಕರ ಸುರಕ್ಷತೆ ಖಚಿತಪಡಿಸುತ್ತದೆ. ಇದಲ್ಲದೆ ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆಯನ್ನು ಸಹ ಹೊಂದಿದೆ.

ನೂತನ ಹೆಲಿಕಾಪ್ಟರ್ ಪರಿಶೀಲಿಸಿದ ಸಚಿವರ ಜೊತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನಿಲ್ ಹುನುಮ್ನವರ್, ಅಲಿ ಗೊರವನಕೊಳ್ಳ ಸೇರಿದಂತೆ ಇತರರು ಇದ್ದರು.

Previous articleನ್ಯೂಯಾರ್ಕ್ ಅಲ್ಬನಿಯಲ್ಲಿ ಪ್ರಧಾನಿ ಮೋದಿ ಜನ್ಮದಿನ ಆಚರಣೆ
Next articleಕಲಬುರಗಿ: ಅಫಜಲಪುರನಲ್ಲಿ ನಿರಂತರ ಮಳೆ, ಶಾಲೆಗೆ ರಜೆ

LEAVE A REPLY

Please enter your comment!
Please enter your name here