ಬೆಳಗಾವಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದಲ್ಲಿ ಭಾಗಿಯಾಗಿದ್ದ ಶಾಸಕ ಬಿ. ನಾಗೇಂದ್ರ ಅವರಿಗೆ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಲ್ಲ ಎಂದು ಆರೋಪಿಸಿ, ಬೆಳಗಾವಿಯದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಣಿ ಚನ್ನಮ್ಮನ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು, ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟ ಕಾಂಗ್ರೆಸ್ ಸರ್ಕಾರ ಎಂದು ದೂರಿದ ಪ್ರತಿಭಟನಾಕಾರರು ಸಚಿವ ನಾಗೇಂದ್ರ ಅವರ ಭಾವಚಿತ್ರವಿರುವ ಕರಪತ್ರ ಸುಟ್ಟುಹಾಕಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಕಾರಣ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನೂ ಕೊಟ್ಟಿದ್ದರು. ಈಗ ಮತ್ತೆ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ಅರವಿಂದ ಪಾಟೀಲ, ಡಾ.ವಿಶ್ವನಾಥ ಪಾಟೀಲ, ಮುಖಂಡ ಮಹಾಂತೇಶ ವಕ್ಕುಂದ ಇತರರಿದ್ದರು.





















