ಬೌದ್ಧ ಬಿಕ್ಕುಗಳಿಗೆ ಶೀಘ್ರವೇ ಮಾಸಿಕ ಸಂಭಾವನೆ

0
1

ಬೆಳಗಾವಿ: ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ ನೀಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದ್ದು, ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್.‌ ಜಮೀರ್ ಅಹ್ಮದ್‌ಖಾನ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್‌ನಲ್ಲಿ ಸದಸ್ಯ ಶಿವಕುಮಾರ್ ಕೆ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ನೋಂದಾಯಿತ ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಹಾಗೂ ರಾಜ್ಯದ ವಕ್ಫ್ ನೊಂದಾಯಿತ ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್ ಇಮಾಮ್ ಮತ್ತು ಮುಯೀಜ್ಜನ್‌ಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತಿದೆ ಎಂದು ತಿಳಿಸಿದರು.

Previous articleರೈತನ ಮದುವೆಯಾಗುವವರ ಹೆಸರಲ್ಲಿ 10 ಲಕ್ಷ ಠೇವಣಿ!