ಬೆಳಗಾವಿ: ಯಾರು ಎಷ್ಟೇ ದೊಡ್ಡವರಾದರೂ ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.
ನಂದಗಡದಲ್ಲಿ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಿಗ್ಗೆ ವಿಷಯ ಗೊತ್ತಾಗಿದೆ. ಈ ಬಗ್ಗೆ ವಿಚಾರಣೆ ನಡೆಸಲಾಗುವುದು. ಮುಲಾಜಿಲ್ಲದೆ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: ಕಚೇರಿಯಲ್ಲಿಯೇ ಡಿಜಿಪಿ ರಾಸಲೀಲೆ: ವಿಡಿಯೋ ವೈರಲ್
ಕಾನೂನು ಕ್ರಮ ಗ್ಯಾರೆಂಟಿ: ಯಾರು ತಪ್ಪು ಮಾಡಿದ್ರೂ ಈ ನೆಲದ ಕಾನೂನಿನ ಪ್ರಕಾರ ಕ್ರಮ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.
ನಂದಗಡದಲ್ಲಿ ಸೋಮವಾರ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ರೆ ಎಷ್ಟೇ ದೊಡ್ಡ ಅಧಿಕಾರಿಯಾದರೂ ಕಾನೂನು ಕ್ರಮ ಆಗಿಯೇ ಆಗುತ್ತದೆ ಎಂದರು.






















