Home Advertisement
Home ನಮ್ಮ ಜಿಲ್ಲೆ ಬೆಳಗಾವಿ ಪೋಕ್ಸೊ ಆರೋಪಿಗೆ 40 ವರ್ಷ ಶಿಕ್ಷೆ

ಪೋಕ್ಸೊ ಆರೋಪಿಗೆ 40 ವರ್ಷ ಶಿಕ್ಷೆ

0
3

ಬೆಳಗಾವಿ: ಅಂಗವಿಕಲ ಹಾಗೂ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿತನಿಗೆ ಒಟ್ಟು 40 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿಯ ಪೋಕ್ಸೊ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಹುಕ್ಕೇರಿ ತಾಲೂಕಿನ ಕರಜಗಾ ಗ್ರಾಮದ ಧರೆಪ್ಪ ಅಲಿಯಾಸ್ ಧೀರಜ ಅಂಗತ ಖನಸೆ (25) ಈ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದು, ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

ಕಳೆದ ಆಗಸ್ಟ್ 25ರಂದು ಅಂಗವಿಕಲ ಮತ್ತು ಬುದ್ಧಿಮಾಂದ್ಯ ಬಾಲಕಿ ತನ್ನ ಮನೆ ಕಟ್ಟೆಯ ಮೇಲೆ ಕುಳಿತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಬಾಲಕಿಯ ತಾಯಿ ಸಂಕೇಶ್ವರ ಠಾಣೆಯಲ್ಲಿ ದೂರು ನೀಡಿದ್ದರು. ಗೋಕಾಕ ಉಪವಿಭಾಗದ ಡಿಎಸ್‌ಪಿ ರವಿ ಡಿ. ನಾಯ್ಕ, ನಿಪ್ಪಾಣಿ ಸಿಪಿಐ ಮಹಾಂತೇಶ ಹೊಸಪೇಟಿ ತನಿಖೆ ನಡೆಸಿ ನಂತರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 6 ಲಕ್ಷ ಪರಿಹಾರ ಧನ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ.