ಹುಕ್ಕೇರಿ ತಾಲೂಕು ಮತಕ್ಷೇತ್ರದ ಚುನಾವಣೆ ಮುಂದೂಡಿಕೆ

0
22

ಬೆಳಗಾವಿ: ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಆಡಳಿತ ಮಂಡಳಿ ಸಾಮಾನ್ಯ ಚುನಾವಣೆಯನ್ನು ದಿನಾಂಕ 19 ಅಕ್ಟೋಬರ್ 2025 ರಂದು ನಡೆಸಲು ನಿಗದಿಯಾಗಿದ್ದರೂ, ಹುಕ್ಕೇರಿ ತಾಲೂಕು ವ್ಯಾಪ್ತಿಯ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳ ಪ್ರತಿನಿಧಿ ಮತಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದಲ್ಲಿ ದಾಖಲಾದ ರಿಟ್ ಅರ್ಜಿ ಸಂಖ್ಯೆ 107692/2025 ಪ್ರಕರಣದಲ್ಲಿ, ನ್ಯಾಯಾಲಯವು ಅಕ್ಟೋಬರ್ 17, 2025 ರಂದು ಮಧ್ಯಂತರ ಆದೇಶ ಹೊರಡಿಸಿದ್ದು, ಅದರ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದಕ್ಕೂ ಮುನ್ನ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 23, 2025 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ನಂತರ ಸೆಪ್ಟೆಂಬರ್ 30, 2025 ರಂದು ಉಪವಿಭಾಗಾಧಿಕಾರಿ ಹಾಗೂ ರಿಟರ್ನಿಂಗ್ ಅಧಿಕಾರಿಗಳು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದರು.

ಆದರೆ ನ್ಯಾಯಾಲಯದ ಮಧ್ಯಂತರ ಆದೇಶದನ್ವಯ, ಹುಕ್ಕೇರಿ ತಾಲೂಕು ವ್ಯಾಪ್ತಿಯ ಪ್ರಾಥಮಿಕ ಸಹಕಾರಿ ಸಂಘಗಳ ಮತಕ್ಷೇತ್ರದ ಚುನಾವಣೆಯನ್ನು ಉಚ್ಚ ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೆ ಮುಂದೂಡಲಾಗಿದೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿದೆ

Previous articleRSS  ಪಥ ಸಂಚಲದಲ್ಲಿ ಭಾಗಿಯಾದ ಶಾಸಕರ ಆಪ್ತ ಸಹಾಯಕ ಅಮಾನತು

LEAVE A REPLY

Please enter your comment!
Please enter your name here