ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಔಟ್‌ಗೋಯಿಂಗ್ ಚೀಫ್ ಮಿನಿಸ್ಟರ್. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಮಾತಿನ ದಾಟಿ ನೋಡಿದ್ರೆ ಗೊತ್ತಾಗುತ್ತೆ. ಅಧಿವೇಶನದಲ್ಲಿ ಚರ್ಚೆಗೆ ಪರಿಹಾರ ಸಿಗುತ್ತೆ ಎನ್ನುವ ಆಶಾಭಾವನೆ ಇರಲಿಲ್ಲ ಎಂದಿದ್ದಾರೆ.
ಮುಖ್ಯವಾಗಿ ಸಿಎಂ ಆಗಿ ಎಷ್ಟು ದಿನ ಕುರ್ಚಿ ಮೇಲೆ ಕುಳಿತುಕೊಳ್ಳುತ್ತೀರಿ ಎನ್ನುವುದು ಮುಖ್ಯ ಅಲ್ಲ. ಬದಲಾಗಿ ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದೀರಿ ಎನ್ನುವುದು ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸರ್ಕಾರ ರೈತರಪರ: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ತೀಕ್ಷ್ಣ ಕ್ರಮ
ಅಧಿವೇಶನ ಮುಗಿದ ಬಳಿಕ ಮತ್ತೆ ಗದ್ದುಗೆ ಗುದ್ದಾಟ: ಚಳಿಗಾಲದ ಅಧಿವೇಶನ ಮುಗಿದ ಬಳಿಕ ಮತ್ತೆ ಗದ್ದುಗೆ ಗುದ್ದಾಟ ಮುನ್ನೆಲೆಗೆ ಬರಲಿದೆ. ಕೈ ಪಾಳಯದಲ್ಲಿ ದೆಹಲಿಗೆ ದೌಡಾಯಿಸುವವರ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾದಿ ತಪ್ಪುತ್ತಿವೆ. ಗೃಹಲಕ್ಷ್ಮೀ ಯೋಜನೆಯು ಚುನಾವಣಾ ಲಕ್ಷ್ಮೀ ಆಗಿ ಮಾರ್ಪಟ್ಟಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸಿದರೆ ಸಚಿವರಿಗೆ ಇಲಾಖೆಯ ಬಗ್ಗೆ ಕಿಂಚಿತ್ತೂ ಮಾಹಿತಿ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದರು.






















