SK Home Ad
Home ನಮ್ಮ ಜಿಲ್ಲೆ ಬೆಳಗಾವಿ ನಾಗರ ಪಂಚಮಿಯಂದೇ ಹಾವು ಕಚ್ಚಿ ಮಹಿಳೆ ಸಾವು

ನಾಗರ ಪಂಚಮಿಯಂದೇ ಹಾವು ಕಚ್ಚಿ ಮಹಿಳೆ ಸಾವು

0
27

ಬೆಳಗಾವಿ: ಹೊಲದಲ್ಲಿ ಕಸ ತೆಗೆಯುತ್ತಿದ್ದ ಮಹಿಳೆಯೊಬ್ಬರಿಗೆ ವಿಷಕಾರಿ ಹಾವು ಕಚ್ಚಿ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತಪಟ್ಟಿರುವ ದಾರುಣ ಘಟನೆ ರಾಯಬಾಗ ಪಟ್ಟಣದಲ್ಲಿ ನಡೆದಿದೆ.

ಮೃತರನ್ನು ರಾಯಬಾಗ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದ ನಿವಾಸಿ ಸತ್ಯವ್ವ ಶಿವಾನಂದ ಶಿಂಗೆ (43) ಎಂದು ಗುರುತಿಸಲಾಗಿದೆ.

ಕುಟುಂಬದ ಆರ್ಥಿಕ ಸಂಕಷ್ಟ ನೀಗಿಸಲು ದಿನನಿತ್ಯದಂತೆ ಸತ್ಯವ್ವ ಅವರು ಸೋಮವಾರ ಹೊಲದಲ್ಲಿ ಕಸ ತೆಗೆಯುವ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುತ್ತಿದ್ದ ವೇಳೆ ಹೊಲದಲ್ಲಿ ಅಡಗಿದ್ದ ವಿಷಕಾರಿ ಕೊಳಕು ಮಂಡಲ ಹಾವು ಏಕಾಏಕಿ ಸತ್ಯವ್ವ ಅವರಿಗೆ ಕಚ್ಚಿದೆ.

ಹಾವು ಕಚ್ಚಿದ ತಕ್ಷಣ ತೀವ್ರ ಅಸ್ವಸ್ಥಗೊಂಡ ಸತ್ಯವ್ವ ಅವರನ್ನು ಕುಟುಂಬಸ್ಥರು ಹಾಗೂ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.