Home ನಮ್ಮ ಜಿಲ್ಲೆ ಬಳ್ಳಾರಿ ಬಳ್ಳಾರಿ: ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ

ಬಳ್ಳಾರಿ: ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ

0
7

ಇಬ್ಬರು ಹಿರಿಯ ಅಧಿಕಾರಿಗಳ ವರ್ಗಾವಣೆ, ಹೊಸ ಎಸ್‌ಪಿ ನೇಮಕ

ಬಳ್ಳಾರಿ: ಹೊಸ ವರ್ಷದ ದಿನ ಬಳ್ಳಾರಿಯಲ್ಲಿ ನಡೆದ ಘರ್ಷಣೆಯ ಹಿನ್ನೆಲೆ ಹಾಗೂ ಕಾನೂನು–ಸುವ್ಯವಸ್ಥೆ ನಿರ್ವಹಣೆಯ ವಿಚಾರದಲ್ಲಿ ಉಂಟಾದ ಬೆಳವಣಿಗೆಗಳ ನಡುವೆಯೇ, ಜಿಲ್ಲೆ ಮತ್ತು ವಲಯ ಮಟ್ಟದಲ್ಲಿ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ಕುರಿತು ಬುಧವಾರ ಅಧಿಕೃತ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ಆದೇಶದಂತೆ, 2004ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪಿ.ಎಸ್. ಹರ್ಷ ಅವರನ್ನು ಬಳ್ಳಾರಿ ವಲಯದ ಹೊಸ ವಲಯ ಪೊಲೀಸ್ ಮಹಾನಿರೀಕ್ಷಕ (IGP) ಆಗಿ ನಿಯೋಜಿಸಲಾಗಿದೆ. ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವರ್ತಿಕಾ ಕಟಿಯಾರ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಉಪ ಮಹಾನಿರೀಕ್ಷಕ (DIG) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಬಾಲಕನ AI ಜ್ಞಾನಕ್ಕೆ ಬೆರಗಾದ ಶಶಿ ತರೂರ್‌

ಇದರೊಂದಿಗೆ, ಬಳ್ಳಾರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಸುಮನ್ ಪನ್ನೇಕರ್ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಬೆಂಗಳೂರಿನ ಗುಪ್ತವಾರ್ತೆ ವಿಭಾಗದಲ್ಲಿ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಮನ್ ಪನ್ನೇಕರ್ ಅವರಿಗೆ ಜಿಲ್ಲೆಯಲ್ಲಿ ಕಾನೂನು–ಸುವ್ಯವಸ್ಥೆ ಪುನಃಸ್ಥಾಪಿಸುವ ಹೊಣೆ ನೀಡಲಾಗಿದೆ.

ಇದನ್ನೂ ಓದಿ: ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಚಂದ್ರಶೇಖರ್ ಉಡುಪ ನಿಧನ

ಡಿಸೆಂಬರ್ 31ರಂದು ಬಳ್ಳಾರಿಯ ಹೊಸ ಎಸ್‌ಪಿಯಾಗಿ ನೇಮಕಗೊಂಡಿದ್ದ ಪವನ್ ನಿಜೂರ್ ಅವರನ್ನು, ಹೊಸ ವರ್ಷದ ದಿನ ನಡೆದ ಘರ್ಷಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಆ ಬಳಿಕ ತಾತ್ಕಾಲಿಕವಾಗಿ ಚಿತ್ರದುರ್ಗದ ಎಸ್‌ಪಿ ರಂಜಿತ್ ಬಂಡಾರು ಅವರನ್ನು ಬಳ್ಳಾರಿಯ ಉಸ್ತುವಾರಿ ಎಸ್‌ಪಿಯಾಗಿ ನಿಯೋಜಿಸಲಾಗಿತ್ತು.

ಇದನ್ನೂ ಓದಿ: KPS ಶಿಕ್ಷಣಕ್ಕೆ ಸಂಜೀವಿನಿಯೋ? ಹಳ್ಳಿ ಶಾಲೆಗೆ ಮರಣಶಾಸನವೋ?

ಬಳ್ಳಾರಿಯಲ್ಲಿ ನಡೆದ ಘಟನೆ ರಾಜ್ಯ ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಈ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಅಧಿಕಾರಿಗಳ ನೇಮಕದಿಂದ ಜಿಲ್ಲೆಯ ಕಾನೂನು–ಸುವ್ಯವಸ್ಥೆ ಪರಿಸ್ಥಿತಿ ಸುಧಾರಿಸಲಿದೆ ಎಂಬ ನಿರೀಕ್ಷೆಯನ್ನು ಸರ್ಕಾರ ವ್ಯಕ್ತಪಡಿಸಿದೆ.