ಬಳ್ಳಾರಿ: ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಗಲಾಟೆ ಉಂಟಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿಜಾರ್ಜ್ ಮಾಡಿದ ಘಟನೆ ಗುರುವಾರ ಸಂಜೆ ನಡೆದಿದೆ.
ನಗರದ ಜನಾರ್ದನ ರೆಡ್ಡಿ ಮನೆಯ ಮುಂದೆ ಬ್ಯಾನರ್ ಕಟ್ಟುವ ವಿಚಾರವಾಗಿ ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ಗುಂಪುಗಳ ನಡುವೆ ಗಲಾಟೆ ಸಂಭವಿಸಿದೆ.
ಜನವರಿ 3ರಂದು ವಾಲ್ಮೀಕಿ ಪುತ್ಥಳಿ ಅನಾವರಣದ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟಲಾಗುತ್ತಿತ್ತು. ಈ ವೇಳೆ ಗಲಾಟೆ ನಡೆದಿದ್ದು, ಎರಡು ಗುಂಪುಗಳ ನಡುವೆ ಕಲ್ಲು ತೂರಾಟವಾಗಿದೆ.
ಜನಾರ್ದನ ರೆಡ್ಡಿ ಮನೆಯ ಮುಂದೆ ಬ್ಯಾನರ್ ಕಟ್ಟುತ್ತಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಏಕಾಏಕಿ ಗಲಾಟೆ ಉಂಟಾಗಿದೆ. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿಜಾರ್ಜ್ ನಡೆಸಿದ್ದಾರೆ.









