ಶಾಸಕ ಗಣೇಶ್ ಪರ ಬೀದಿಗಿಳಿದ ಬೆಂಬಲಿಗರು: ಸಚಿವ ಸ್ಥಾನಕ್ಕೆ ಆಗ್ರಹ

ಬಳ್ಳಾರಿ: ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಬುಧವಾರ ನೂರಾರು ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಏಳು ತಾಯಿ ಮಕ್ಕಳ ದೇವಸ್ಥಾನದಿಂದ ರಾಯಲ್ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಶಾಸಕ ಗಣೇಶ್ ಅವರ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಪರಿಣಾಮವಾಗಿ … Continue reading ಶಾಸಕ ಗಣೇಶ್ ಪರ ಬೀದಿಗಿಳಿದ ಬೆಂಬಲಿಗರು: ಸಚಿವ ಸ್ಥಾನಕ್ಕೆ ಆಗ್ರಹ