ಬಳ್ಳಾರಿ: ಇತ್ತೀಚೆಗೆ ನಡೆದ ಸಿವಿಲ್ ನ್ಯಾಯಾಧೀಶರ ಹುದ್ದೆಯ ಪರೀಕ್ಷೆಯಲ್ಲಿ ಜಿಲ್ಲೆಯ 27 ವರ್ಷದ ಉದಯಕಿರಣ್ ಡಿ. ಉತ್ತೀರ್ಣರಾಗಿದ್ದಾರೆ.
ನಗರದ ಬಿಐಟಿಎಂ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದರು. ವೀರಶೈವ ವಿದ್ಯಾವರ್ಧಕ ಸಂಘದ ವುಂಕಿ ಸಣ್ಣರುದ್ರಪ್ಪ ಕಾನೂನು ಕಾಲೇಜಿನಲ್ಲಿ ಎಲ್‌ಎಲ್‌ಬಿ ಪದವಿ ಪಡೆದು 2023ರಲ್ಲಿ ತೇರ್ಗಡೆ ಹೊಂದಿದ್ದರು. ಬಳಿಕ ಖಾಸಗಿಯಾಗಿ ವಕೀಲ ವೃತ್ತಿ ಆರಂಭಿಸಿದ್ದರು.























