Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಎಂಜಿನಿಯರಿಂಗ್‌ನಲ್ಲಿ 15 ಹೊಸ ಕೋರ್ಸ್

ಎಂಜಿನಿಯರಿಂಗ್‌ನಲ್ಲಿ 15 ಹೊಸ ಕೋರ್ಸ್

0
2

ಬೆಂಗಳೂರು: ಸರ್ಕಾರದ 11 ಪಾಲಿಟೆಕ್ನಿಕ್ ಹಾಗೂ ಚಿತ್ರದುರ್ಗದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಹೆಚ್ಚಿನ ಬೇಡಿಕೆಯಿರುವ ಕೋರ್ಸ್‌ಗಳಾದ ಎಐ, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಸೇರಿದಂತೆ 15 ವಿವಿಧ ಹೊಸ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಲೈಬ್ರರಿ, ಅಧ್ಯಯನ ಕೇಂದ್ರ ಸ್ಥಾಪನೆ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ಧಾರವಾಡ ಮತ್ತು ಬೆಂಗಳೂರಿನಲ್ಲಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಸರ್ಕಾರ ಅನುಕೂಲ ಮಾಡಲಿದೆ.

ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ ತಡೆಯಲು `ರೋಹಿತ್ ವೇಮುಲ ಕಾಯ್ದೆ’ ಜಾರಿ ತರಲಾಗುವುದು.

ವೃತ್ತಿ ಜೀವನದ ಆರಂಭಿಕ ಹಂತದಲ್ಲಿರುವ ವಿಜ್ಞಾನ, ತಾಂತ್ರಿಕ, ಗಣಿತ ಮತ್ತು ಇಂಜಿನಿಯರಿಂಗ್ ವಿಭಾಗಗಳಲ್ಲಿನ ಆಯ್ದ 3 ಸಾವಿರ ಮಹಿಳಾ ಪದವೀಧರರಿಗೆ ಒಟ್ಟು 13.50 ಕೋಟಿ ರೂ. ವೆಚ್ಚದಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ವೃತ್ತಿನಿರತ ತರಬೇತಿಗಳನ್ನು ಜಾರಿಗೊಳಿಸಲಾಗುವುದು.