Home Advertisement
Home ನಮ್ಮ ಜಿಲ್ಲೆ ಬೆಂಗಳೂರು ವಿಕಸಿತ ಭಾರತ ಕಟ್ಟುವಂತ ಅಭಿವೃದ್ಧಿ ಶೀಲ ಬಜೆಟ್

ವಿಕಸಿತ ಭಾರತ ಕಟ್ಟುವಂತ ಅಭಿವೃದ್ಧಿ ಶೀಲ ಬಜೆಟ್

0
2

ಬೆಂಗಳೂರು: ಭಾರತವನ್ನು ವಿಶ್ವದ 3ನೇ ಆರ್ಥಿಕ ಶಕ್ತಿಯನ್ನಾಗಿ ಮಾಡಲು ವಿಕಸಿತ ಭಾರತ ಕಟ್ಟುವಂತ ಅಭಿವೃದ್ಧಿಶೀಲವಾಗಿರುವ ಮಾದರಿ ಬಜೆಟ್‌ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟ್‌ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ನಾಗರಿಕರ ಸಾಮರ್ಥ್ಯವನ್ನು ದೇಶದ ಆರ್ಥಿಕ ಚಟುವಟಿಕೆಯಲ್ಲಿ ಅಳವಡಿಸಲು ಯೋಜನೆಗಳನ್ನು ಹಲವಾರು ನೀತಿಗಳನ್ನು ಈ ಬಜೆಟ್‌ನಲ್ಲಿ ಘೋಷಿಸಿದ್ದಾರೆ ಎಂದರು..

ಇದನ್ನೂ ಓದಿ: ಕೇಂದ್ರ ಬಜೆಟ್‌: ರೈತರಿಗೆ ಬಂಪರ್‌ ಕೊಡುಗೆ

ಭವಿಷ್ಯದ ಚಾಂಪಿಯನ್‌ಗಳಿಗಾಗಿ ಸುಮಾರು 10 ಸಾವಿರ ಕೋಟಿ ರೂ. ಆರ್ಥಿಕ ನೆರವು ಕೊಡುವಂತಹ ಯೋಜನೆ ಮಾಡಿದ್ದಾರೆ. ಆರ್ಥಿಕ ಅಭಿವೃದ್ಧಿ ಸ್ಥೀರಿಕರಣ ಮತ್ತು ಹಣದುಬ್ಬರ ನಿಯಂತ್ರಣ ಮಾಡುವುದು, ಜನರ ಆಶೋತ್ತರಗಳನ್ನು ಈಡೇರಿಸುವುದರ ಜೊತೆಗೆ 7.4 ಆರ್ಥಿಕ ಬೆಳವಣಿಗೆಯನ್ನು ಮುಂದುವರೆಸಿ ಎಲ್ಲ ಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.

ಸಣ್ಣ ಕೈಗಾರಿಕೆಗೆ ವಿಶೇಷವಾದ ಒತ್ತು ಕೊಟ್ಟಿದ್ದಾರೆ. ಟೆಕ್ಸ್‌ಟೈಲ್, ಚರ್ಮದ ಉತ್ಪನ್ನಗಳು, ಐಟಿ ಬಿಟಿ ಡಾಟಾ ಸೆಂಟರ್‌ಗಳಿಗೆ ಬಹಳಷ್ಟು ಒತ್ತು ಕೊಟ್ಟಿದ್ದಾರೆ. ವಿಶೇಷವಾಗಿ ನಗರ ಮೂಲಸೌಕರ್ಯಕ್ಕೆ ಬಹಳ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಬಹಳಷ್ಟು ಒತ್ತು ಕೊಟ್ಟಿದೆ. ಸುಮಾರು 12.5 ಲಕ್ಷ ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ವಿವಿಧ ಯೋಜನೆಗಳಲ್ಲಿ ಹೂಡುತ್ತಿದೆ. ವಿತ್ತೀಯ ಕೊರತೆಯನ್ನು 4.3ಕ್ಕೆ ನಿಯಂತ್ರಣ ಮಾಡಿರುವುದು ದೊಡ್ಡ ಸಾಧನೆ. ಮೂಲ ಸೌಕರ್ಯದಲ್ಲಿ ರಸ್ತೆ ಹೈ ಸ್ಪೀಡ್ ರೈಲುಗಳು, 20 ಜಲ ಸಾರಿಗೆ ಒತ್ತು ಕೊಟ್ಟಿರುವುದು ಸಾರಿಗೆಯಲ್ಲಿ ಹೊಸ ಆಯಾಮ ತೆರೆದಂತಾಗಿದೆ. ಅಭಿವೃದ್ಧಿ ಪಥದಲ್ಲಿ ಭಾರತವನ್ನು ಆರ್ಥಿಕವಾಗಿ ವಿಶ್ವದ ಮೂರನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್‌ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಕೇಂದ್ರ ಬಜೆಟ್‌: ಜೀವರಕ್ಷಕ ಔಷಧಿಗಳ ದರ ಇಳಿಕೆ

ವಿದೇಶಗಳಿಂದ ಬರುವ ವಸ್ತುಗಳಿಗೆ ಸಂಪೂರ್ಣ ತೆರಿಗೆ ಫ್ರೀ ಮಾಡಿದ್ದಾರೆ. ನಾಲ್ಕು ಕರ್ತವ್ಯ ಪಥ ಅಂತ ಹೇಳಿದ್ದಾರೆ. ಮೊದಲನೆಯದಾಗಿ ಆರ್ಥಿಕ ಬೆಳವಣಿಗೆ, ಎರಡನೇಯದು ಸಬ್ ಕಾ ಸಾಥ್ ಸಬ್ ಕೆ ವಿಕಾಸ್ ಎನ್ನುವ ತತ್ವದಲ್ಲಿ ಮಹಿಳೆಯರು, ಯುವಕರು ರೈತರಿಗೆ ಎಲ್ಲರನ್ನು ಒಳಗೊಂಡಿರುವ ಈ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ.

Previous articleಕೇಂದ್ರ ಬಜೆಟ್‌: ಜೀವರಕ್ಷಕ ಔಷಧಿಗಳ ದರ ಇಳಿಕೆ