ಬೆಂಗಳೂರು: ಕೆಲಸ ಖಾಲಿ ಇದೆ, ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 15 ಕೊನೆ ದಿನ

0
57

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ, ಅರ್ಹರು ಅರ್ಜಿ ಸಲ್ಲಿಕೆ ಮಾಡಲು ಸೆಪ್ಟೆಂಬರ್ 15, 2025 ಕೊನೆಯ ದಿನವಾಗಿದೆ.

ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿನ ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಬಿಬಿಎಂಪಿ ವಲಯ ವಾರ್ಡ್ ಗಳಲ್ಲಿ/ ಪುರಸಭೆ/ ನಗರ ಸಭೆಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಮಾಸಿಕ ಗೌರವಧನದ ಆಧಾರದಲ್ಲಿಈ ನೇಮಕಾತಿ ಮಾಡಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು.

ಅರ್ಜಿ ಸಲ್ಲಿಕೆ ಮಾಡುವವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ/ ಅನುರ್ತೀಣರಾಗಿರಬೇಕು. ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಬಿಬಿಎಂಪಿ ವಾರ್ಡ್‌ಗಳಲ್ಲಿ ಸ್ಥಳೀಯವಾಗಿ ವಾಸವಿರಬೇಕು.

ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆಯನ್ನು ಹೊಂದಿರಬೇಕು (ಅಂಗವಿಕಲರ ಗುರುತಿನ ಚೀಟಿ ಪ್ರತಿಯನ್ನು ಲಗತ್ತಿಸಬೇಕು). ಭಾಗಶಃ ದೃಷ್ಠಿದೋಷವುಳ್ಳವರು, ಭಾಗಶಃ ಶ್ರವಣದೋಷವುಳ್ಳವರು, ದೈಹಿಕ ಅಂಗವಿಕಲರು ಮಾತ್ರ ಅರ್ಜಿ ಸಲ್ಲಿಸಬಹುದು.

ಆಸಕ್ತ ವಿಕಲಚೇತನ ಅಭ್ಯರ್ಥಿಗಳು ಅರ್ಜಿಗಳನ್ನು ಸೆಪ್ಟೆಂಬರ್ 15ರ ಸಸಂಜೆ 5 ಗಂಟೆಯೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 080-29752324 ಸಂಖ್ಯೆಗೆ ಸಂಪರ್ಕಿಸಬಹುದು.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿನ ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಾದ ಕೆ.ಗೊಲ್ಲಹಳ್ಳಿ, ಹೆಚ್. ಗೊಲ್ಲಹಳ್ಳಿ, ಕಗ್ಗಲಿಪುರ, ಅಗರ, ಯಲಹಂಕ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಯಾದ ದೊಡ್ಡಜಾಲ, ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಯಾದ ಕೊಡತಿ ಮತ್ತು ಆನೇಕಲ್ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಯಾದ ಬನ್ನೇರುಘಟ್ಟ ಇಲ್ಲಿ ಖಾಲಿ ಇರುವ ಗ್ರಾಮೀಣ ಪುರ್ನವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಈ ಹುದ್ದೆಗಳನ್ನು ಮಾಸಿಕ ಗೌರವಧನ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷದೊಳಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ/ ಅನುರ್ತೀಣರಾಗಿರಬೇಕು.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅಭ್ಯರ್ಥಿಯು ಸ್ಥಳೀಯವಾಗಿ ವಾಸವಿರಬೇಕು. ಸ್ಥಳೀಯವಾಗಿ ವಾಸಿಸುತ್ತಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆಯನ್ನು ಹೊಂದಿರಬೇಕು (ಅಂಗವಿಕಲರ ಗುರುತಿನ ಚೀಟಿ ಪ್ರತಿಯನ್ನು ಲಗತ್ತಿಸಬೇಕು), ಭಾಗಶಃ ದೃಷ್ಠಿದೋಷವುಳ್ಳವರು, ಭಾಗಶಃ ಶ್ರವಣದೋಷವುಳ್ಳವರು, ದೈಹಿಕ ಅಂಗವಿಕಲರು ಮಾತ್ರ ಅರ್ಜಿ ಸಲ್ಲಿಸಬಹುದು.

ಆಸಕ್ತ ವಿಕಲಚೇತನರು, ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು-29 ಇಲ್ಲಿಗೆ ಸೆಪ್ಟೆಂಬರ್ 15ರ ಸಂಜೆ 5 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳ ಕಛೇರಿ ಅಥವಾ ದೂರವಾಣಿ ಸಂಖ್ಯೆ 080-29752324 ಗೆ ಸಂಪರ್ಕಿಸಬಹುದು.

Previous articleಏಪ್ಯಾಕಪ್‌ ಕ್ರಿಕೆಟ್‌ ಟೂರ್ನಿಗೆ ಭಾರತ ತಂಡ ಪ್ರಕಟ
Next articleತುಂಗಾ ʼಸುಭದ್ರ’ ಮಾಡದೇ ʼಆರತಿ’ಗೆ ತಯಾರಿ!

LEAVE A REPLY

Please enter your comment!
Please enter your name here