ಬೆಂಗಳೂರು: ಜೆಸಿಬಿ ಘರ್ಜನೆ, 7.69 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು

0
53

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 7.69 ಕೋಟಿ ಅಂದಾಜು ಮೌಲ್ಯದ ಒಟ್ಟು 5 ಎಕರೆ 0.07.20 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗುಂಡುತೋಪು, ಸ್ಮಶಾನ, ಸರ್ಕಾರಿ ಓಣಿ, ಬಿಳಿಕೆರೆ ಜಾಜಿಮುಳಗಡೆ, ಖರಾಬು, ಗೋಮಾಳ ಮತ್ತು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಯಲಹಂಕ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ , ಜಿಲ್ಲಾಧಿಕಾರಿಗಳ ಕಛೇರಿಯ ಕಚೇರಿಯ ಸಹಾಯಕರು, ವಿವಿಧ ತಾಲ್ಲೂಕಿನ ತಹಶೀಲ್ದಾರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಕಾರ್ಯಾಚರಣೆ ವಿವರಗಳು

  • ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ದೇವಗೆರೆ ಗ್ರಾಮದ ಸ.ನಂ 71 ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.22 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ.0.50 ಲಕ್ಷಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ದೊಡ್ಡೇರಿ ಗ್ರಾಮದ ಸ.ನಂ 62ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.0.19 ಲಕ್ಷಗಳಾಗಿರುತ್ತದೆ.
  • ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಶಿವನಪುರ ಗ್ರಾಮದ ಸ.ನಂ 2/4ಎ ರ ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02.08 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 0.20 ಲಕ್ಷಗಳಾಗಿರುತ್ತದೆ. ದಾಸನಪುರ ಹೋಬಳಿಯ ಶಿವನಪುರ ಗ್ರಾಮದ ಸ.ನಂ 2/4ಬಿ1 ರ ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.012 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 0.10 ಲಕ್ಷಗಳಾಗಿರುತ್ತದೆ.
  • ದಾಸನಪುರ ಹೋಬಳಿಯ ಹೊಸಹಳ್ಳಿಪಾಳ್ಯ ಗ್ರಾಮದ ಸ.ನಂ 40 ರ ಬಿಳಿಕೆರೆ ಜಾಜಿಮುಳಗಡೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2 ಎಕರೆಯಾಗಿದ್ದು, ಅಂದಾಜು ಮೌಲ್ಯ ರೂ. 2 ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ತೊರೆನಾಗಸಂದ್ರ ಗ್ರಾಮದ ಸ.ನಂ 34ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.27 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 1.50 ಕೋಟಿಗಳಾಗಿರುತ್ತದೆ.
  • ಯಲಹಂಕ ತಾಲ್ಲೂಕಿನ ಹೆಸರಘಟ್ಟ-1 ಹೋಬಳಿಯ ಕೊಡಿಗೆತಿರುಮಳಾಪುರ ಗ್ರಾಮದ ಸ.ನಂ 14 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.31 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 1.20 ಕೋಟಿಗಳಾಗಿರುತ್ತದೆ. ಹೆಸರಘಟ್ಟ-2 ಹೋಬಳಿಯ ಕಾಕೋಳು ಗ್ರಾಮದ ಸ.ನಂ 44ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆಯಾಗಿದ್ದು, ಅಂದಾಜು ಮೌಲ್ಯ ರೂ. 2 ಕೋಟಿಗಳಾಗಿರುತ್ತದೆ.
Previous articleRBI ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ
Next articleನವೆಂಬರ್‌ಗೆ ಸಚಿವ ಸಂಪುಟ ವಿಸ್ತರಣೆ – ಸಚಿವ ಜಮೀರ್ ಅಹ್ಮದ್ ‌ಖಾನ್

LEAVE A REPLY

Please enter your comment!
Please enter your name here