SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ

0
11

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ನಗರದ ಪ್ಯಾಲೆಸ್ ಗ್ರೌಂಡ್‌ನಲ್ಲಿ ನಡೆದ ಅದ್ಧೂರಿ ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನವನ್ನು ಹರಿಪ್ರಸಾದ್ ಅವರಿಗೆ ಹಸ್ತಾಂತರಿಸಿದರು. ಬಳಿಕ ಅಧಿಕಾರ ಹಸ್ತಾಂತರದ ದಾಖಲೆಗಳಿಗೆ ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ಸಹಿ ಹಾಕುವ ಮೂಲಕ ಅಧ್ಯಕ್ಷ ಸ್ಥಾನ ಬದಲಾವಣೆಯ ಪ್ರಕ್ರಿಯೆ ಪೂರ್ಣಗೊಂಡಿತು.

ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಹಾಗೂ ಸಚಿವರು ಉಪಸ್ಥಿತರಿದ್ದರು.

ಇದೇ ವೇಳೆ ಡಿಕೆ ಸುರೇಶ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಹೆಚ್.ಕೆ. ಪಾಟೀಲ್, ಕೆ.ಎಚ್. ಮುನಿಯಪ್ಪ, ಚೆಲುವರಾಯಸ್ವಾಮಿ, ಆರ್.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್, ಅಂಜಲಿ ನಿಂಬಾಳ್ಕರ್, ಲಕ್ಷ್ಮಿ ಹೆಬ್ಬಾಳ್ಕರ್, ವೀರಪ್ಪ ಮೊಯ್ಲಿ, ಸಲೀಂ ಅಹಮದ್, ಝಮೀರ್ ಅಹಮದ್ ಖಾನ್, ಯು.ಟಿ. ಖಾದರ್, ಕೆ.ಜೆ. ಜಾರ್ಜ್, ಹೆಚ್.ಸಿ. ಮಹದೇವಪ್ಪ, ತನ್ವೀರ್ ಸೇಠ್, ವಸಂತ್ ಕುಮಾರ್ ಹಾಗೂ ಮಂಜುನಾಥ್ ಭಂಡಾರಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ಹೊಸ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ ಸಿಗಲಿದೆ ಎಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದರು.