Home ನಮ್ಮ ಜಿಲ್ಲೆ ಬೆಂಗಳೂರು ಬೆಂಗಳೂರಿನಲ್ಲಿ ಬ್ಯಾಂಕ್ ಕೆಲಸ ಖಾಲಿ ಇದೆ: ಹುದ್ದೆ, ವೇತನ

ಬೆಂಗಳೂರಿನಲ್ಲಿ ಬ್ಯಾಂಕ್ ಕೆಲಸ ಖಾಲಿ ಇದೆ: ಹುದ್ದೆ, ವೇತನ

0

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಚಾಮರಾಜಪೇಟೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ.

ಅರ್ಹ ಅಭ್ಯರ್ಥಿಗಳಿಂದ ಕಿರಿಯ ಸಹಾಯಕರು ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ ಕಿರಿಯ ಸಹಾಯಕರು (62), ಅಟೆಂಡರ್ (12). ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 10/9/2025 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ : ಕಿರಿಯ ಸಹಾಯಕರ ಹುದ್ದೆಗೆ ಭಾರತದ ಕಾನೂನಿನ ಅಡಿಯಲ್ಲಿ ಸ್ಥಾಪನೆಯಾದ ಯಾವುದೇ ವಿಶ್ವವಿದ್ಯಾನಿಲಯ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ ಕನ್ನಡವನ್ನು ಸ್ವಚ್ಚವಾಗಿ ಮಾತನಾಡಬೇಕು ಮತ್ತು ಅರ್ಥ ಮಾಡಿಕೊಳ್ಳಬೇಕು ಮತ್ತು ಆ) ಕಂಪ್ಯೂಟರ್ ಅಪರೇಷನ್ಸ್ ಮತ್ತು ಅಪ್ಲಿಕೇಷನ್‌ನಲ್ಲಿ ಜ್ಞಾನ ಹೊಂದಿರಬೇಕು.

ಅಟೆಂಡರ್ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. (ಸದರಿ ಪರೀಕ್ಷೆಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಓದಿರತಕ್ಕದ್ದು). ಎರಡೂ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರು ಅಭ್ಯರ್ಥಿಗಳು ಕರ್ನಾಟಕ ನಿವಾಸಿಗಳಾಗಿದ್ದು, ಕನ್ನಡ ಭಾಷೆ ಬರೆಯಲು ಮತ್ತು ಓದಲು ಬಲ್ಲವರಾಗಿರಬೇಕು.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ, ಗರಿಷ್ಠ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ / ಪ್ರವರ್ಗ-1 40 ವರ್ಷಗಳು. ಹಿಂದುಳಿದ ಜಾತಿ ಮತ್ತು ಹಿಂದುಳಿದ ವರ್ಗದವರಿಗೆ 38 ವರ್ಷಗಳು. ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು.

ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ ಸೈಟ್ www.bccbi.co.in ಅನ್ನು ತೆರೆದ ಕೂಡಲೇ ಕಂಪ್ಯೂಟರ್ ಪರದೆಯ ಮೇಲೆ BCCBANK RECRUITMENT 2025 ಎಂದು ಮೂಡುತ್ತದೆ ಮತ್ತು ಅಧಿಸೂಚನೆ/ ಪರೀಕ್ಷಾ ಶುಲ್ಕ ವಿವರಗಳು ಲಭ್ಯವಾಗುತ್ತದೆ.

ಅಭ್ಯರ್ಥಿಗಳು ಅಧಿಸೂಚನೆಯಲ್ಲಿನ ವಿವರಗಳನ್ನು ಮತ್ತು ಅರ್ಜಿ ಸಲ್ಲಿಸುವ ಸೂಚನೆಗಳನ್ನು ತಪ್ಪದೇ ಓದಿಕೊಂಡು ಅದರಂತೆ ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಅಥವಾ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ ಸಂಖ್ಯೆ 9036072155 ಅನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರ ತನಕ ಸಂಪರ್ಕಿಸಿ.

NO COMMENTS

LEAVE A REPLY

Please enter your comment!
Please enter your name here

Exit mobile version