ಬೆಂಗಳೂರು: ಕಸದ ಆಟೋ ಬರುವ ಸಮಯ ಪರಿಷ್ಕರಣೆ

0
38

ಬೆಂಗಳೂರು ನಗರದಲ್ಲಿ ಮನೆ ಮನೆ ಕಸ ಸಂಗ್ರಹಣೆಗೆ ಬರುವ ಆಟೋಗಳ ಸಮಯ ಪರಿಷ್ಕರಣೆ ಮಾಡಲಾಗಿದೆ. ಸರಿಯಾದ ಸಮಯಕ್ಕೆ ಆಟೋಗಳು ಬರುವುದಿಲ್ಲ ಎಂಬ ದೂರಿನ ಹಿನ್ನಲೆಯಲ್ಲಿ ಸಮಯ ಪರಿಷ್ಕರಣೆ ಮಾಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸಂಗ್ರಹಣೆಗೆ ಬರುವ ಆಟೋಗಳ ಸಮಯವನ್ನು ಪರಿಷ್ಕರಣೆ ಮಾಡಿ ಆದೇಶಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಸಮಯ ಪರಿಷ್ಕರಣೆ ಮಾಡಲಾಗಿದೆ ಎಂದು ಹೇಳಿದೆ.

ಈ ಕುರಿತು ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಆದೇಶವನ್ನು ಹೊರಡಿಸಿದ್ದಾರೆ. ಹೊಸ ವೇಳಾಪಟ್ಟಿಗೆ ಜನರು ಹೇಗೆ ಪ್ರತಿಕ್ರಿಯೆ ನೀಡುತ್ತಾರೆ? ಎಂದು ಕಾದು ನೋಡಬೇಕಿದೆ.

ಹೊಸ ವೇಳಾಪಟ್ಟಿ ವಿವರ: ಬೆಂಗಳೂರು ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಸಾರ್ವ ಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧ ವಾರ್ಡುಗಳಲ್ಲಿ, ಕಾರ್ಯನಿರ್ವಹಿಸುತ್ತಿರುವ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ದಾಖಲೆ) ಸಮಯವನ್ನು ಪರಿಷ್ಕರಿಸಲಾಗಿದೆ.

ದಿನಾಂಕ 25-08-2025ರಿಂದ ವಾಹನಗಳ ಸ್ಕ್ಯಾನಿಂಗ್ ಸಮಯವನ್ನು ಬೆಳಗ್ಗೆ 5.30ರಿಂದ 6.30 ರವರೆಗೆ ನಿಗದಿಪಡಿಸಲಾಗಿದೆ. ಹಿಂದಿನಂತೆ ಜಾರಿಯಲ್ಲಿದ್ದ ಬೆಳಗ್ಗೆ 6 ರಿಂದ 7.30 ಸಮಯವನ್ನು ಒಂದು ಗಂಟೆ ಮುಂಚಿತಗೊಳಿಸುವ ಮೂಲಕ ತ್ಯಾಜ್ಯ ಸಂಗ್ರಹಣೆಯನ್ನು ಜನರ ದೈನಂದಿನ ಕಾರ್ಯ ವೈಖರಿಯ ಜೊತೆಗೆ ಹೊಂದುವಂತೆ ಕ್ರಮ ಕೈಗೊಳ್ಳಲಾಗಿದೆ.

ಈ ಬದಲಾವಣೆಯ ಮೂಲಕ ನಿವಾಸಿಗಳು ಕೆಲಸಕ್ಕೆ ಹೊರಡುವ ಮೊದಲು ತ್ಯಾಜ್ಯವನ್ನು ನೀಡಲು ಅನುಕೂಲವಾಗುವುದರ ಜೊತೆಗೆ, ಸಾರ್ವಜನಿಕರಿಂದ ಎಲ್ಲೆಂದರಲ್ಲಿ ತ್ಯಾಜ್ಯ, ಎಸೆಯುವ ಪ್ರಕರಣ ಮತ್ತು ಕಪ್ಪು ಚುಕ್ಕಿ (Black Spot) ಗಳು ರೂಪುಗೊಳ್ಳುವುದನ್ನು ತಡೆಗಟ್ಟಲಾಗುವುದು. ಈ ಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾರ್ವಜನಿಕರ ಸಹಕಾರವನ್ನು ಕೋರಿದೆ ಎಂದು ಮನವಿ ಮಾಡಲಾಗಿದೆ.

Previous articleಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ; ಅಧಿಕೃತ ಆದೇಶ ಪ್ರಕಟ
Next articleಉತ್ತರ ಕನ್ನಡ ಜಿಲ್ಲೆ: ಮನೆ ಮನೆಗೆ ಪೋಲಿಸ್ ಕಾರ್ಯಕ್ರಮ

LEAVE A REPLY

Please enter your comment!
Please enter your name here