SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಬೆಂಗಳೂರು: ಮುಂದುವರೆದ ಸಿಡಿಲು, ಮಿಂಚು ಸಮೇತ ಮಳೆ; ಇನ್ನೂ ಎಷ್ಟು ದಿನ?

ಬೆಂಗಳೂರು: ಮುಂದುವರೆದ ಸಿಡಿಲು, ಮಿಂಚು ಸಮೇತ ಮಳೆ; ಇನ್ನೂ ಎಷ್ಟು ದಿನ?

0
29

ಬೆಂಗಳೂರು: ಮಳೆ ಹೆಚ್ಚಾಗುತ್ತಿರುವುದರಿಂದ, ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಅಪಾಯಗಳು ಉಂಟಗುತ್ತಲೇ ಇದೆ. ಹಾಗೇ ಈ ಮಳೆಯ ಆರ್ಭಟ ಎಲ್ಲಿಯವರೆಗೂ ಮುಂದುವರಿಯಲಿದೆ. ಅಲ್ಲದೇ.. ಬೆಂಗಳೂರು ಸೇರಿದಂತೆ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಭರ್ಜರಿ ಮಳೆಯ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಭಾರತ ಹವಾಮಾನ ಇಲಾಖೆ ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿಗೆ ‘ಹಳದಿ ಎಚ್ಚರಿಕೆ’ ಘೋಷಿಸಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ನಿನ್ನೆ ಸಂಜೆಯಷ್ಟೇ ರಾಜಧಾನಿ ಬೆಂಗಳೂರು ಹಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಸುರಿದ ಭಾರೀ ಮಳೆಗೆ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು. ಇದರ ಬೆನ್ನಲ್ಲೇ ಐಎಂಡಿ ಮತ್ತೊಂದು ಎಚ್ಚರಿಕೆ ನೀಡಿದ್ದು, ಇಂದು ಸಹ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕೇವಲ ಬೆಂಗಳೂರು ಅಷ್ಟೇ ಅಲ್ಲ.. ರಾಜ್ಯದ ಒಳನಾಡಿನಲ್ಲೂ ಮುಂಗಾರು ಪೂರ್ವ ಮಳೆ ಚುರುಕಾಗಿದೆ. ಇಂದು ತುಮಕೂರು, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ಮೇ ಮತ್ತು 24 ರಂದು ಬಾಗಲಕೋಟೆ, ಕೊಪ್ಪಳ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜಿಟಿಜಿಟಿ ಮಳೆಯಾಗಲಿದೆ.

ಇನ್ನೂ ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಕೊಂಚ ಕಡಿಮೆಯಾಗಲಿದ್ದರೂ, ಕರಾವಳಿ ಮತ್ತು ಮಲೆನಾಡಿನ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯಲ್ಲಿ ನೈಋತ್ಯ ಮುಂಗಾರು ಮುನ್ನಡೆಯುತ್ತಿರುವುದರಿಂದ, ಮುಂದಿನ ವಾರ ಇಡೀ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ ಸುರಿದರೂ ಸಹ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ, ಬಿಸಿಲು ಮತ್ತು ಸೆಕೆ ಮುಂದುವರಿಯಲಿದೆ. ಹೀಗಾಗಿ ಸಾರ್ವಜನಿಕರು ಹೊರಗೆ ಹೋಗುವಾಗ ಕೊಡೆ ಹಿಡಿಯುವುದನ್ನು ಮರೆಯಬೇಡಿ ಸುರಕ್ಷಿತವಾಗಿರಿ.