Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಹಣ, ಹೆಂಡದ ಬಲದಿಂದ ಕಾಂಗ್ರೆಸ್‌ಗೆ ಜಯ

ಹಣ, ಹೆಂಡದ ಬಲದಿಂದ ಕಾಂಗ್ರೆಸ್‌ಗೆ ಜಯ

0
22

ಬೆಂಗಳೂರು: ಕರ್ನಾಟಕದಲ್ಲಿ ದಾವಣೆಗೆರೆ ಮತ್ತು ಬಾಗಲಕೋಟೆಯಲ್ಲಿ ಹಣ ಮತ್ತು ಹೆಂಡದ ಬಲದಿಂದ ಕಾಂಗ್ರೆಸ್‌ಗೆ ಗೆಲುವು ಸಾಧಿಸಿದೆ. ಆದರೆ, ರಾಜ್ಯದ ವಾಸ್ತವಿಕ ಸ್ಥಿತಿಯೇ ಬೇರೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಆಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಅಲ್ಲಿನ ಜನರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತಾ ಅವರ ನಾಯಕತ್ವಕ್ಕೆ ಕೊಟ್ಟಿರುವ ಮನ್ನಣೆ ಮತ್ತು ಬೆಂಬಲ. ಹೀಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲದೇ ಆಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಶರ್ಮಾ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.