SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಸರ್ಕಾರ ರಚನೆಗೆ ಹಕ್ಕು ಮಂಡನೆ, ಜೂ. 3ಕ್ಕೆ ಡಿಕೆಶಿ ಪ್ರಮಾಣವಚನ

ಸರ್ಕಾರ ರಚನೆಗೆ ಹಕ್ಕು ಮಂಡನೆ, ಜೂ. 3ಕ್ಕೆ ಡಿಕೆಶಿ ಪ್ರಮಾಣವಚನ

0
43

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್‌ ಅವರು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ರಾಜ್ಯಪಾಲರು ಕೂಡ ಸರಕಾರ ರಚನೆಗೆ ಡಿ.ಕೆ. ಶಿವಕುಮಾರ್‌ ಅವರಿಗೆ ಆಹ್ವಾನ ನೀಡಿದ್ದು, ಡಿಕೆಶಿ ಜೂನ್‌ 3ರ ಸಂಜೆ 4 ಗಂಟೆ 5 ನಿಮಿಷಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಸಿದ್ದರಾಮಯ್ಯನವರು, ಸಿಎಲ್‌ಪಿ ನಾಯಕರನ್ನಾಗಿ ಡಿ.ಕೆ. ಶಿವಕುಮಾರ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಜಿ. ಪರಮೇಶ್ವರ್‌ ಅನುಮೋದಿಸಿದರು. ಇದಕ್ಕೆ ಎಲ್ಲ ಶಾಸಕರು ಕೈ ಎತ್ತುವ ಮೂಲಕ ಅನುಮೋದನೆ ನೀಡಿದ್ದರು.

ಆ ಬಳಿಕ ಸಿದ್ದರಾಮಯ್ಯ, ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಸತೀಶ್‌ ಜಾರಕಿಹೊಳಿ, ಎಂ.ಬಿ. ಪಾಟೀಲ್‌ ಸೇರಿದಂತೆ ಇನ್ನಿತರ ನಾಯಕರು ಜತೆಗೂಡಿ ರಾಜ್ಯಪಾಲರ ಬಳಿ ಸಿಎಲ್‌ಪಿ ಸಭೆಯ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.