ಮಾನವ – ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋಣ್ ಕ್ಯಾಮೆರಾ ನಿಗಾಗೆ ಸಿಎಂ ಸೂಚನೆ

0
12

ಬೆಂಗಳೂರು: ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮೆರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.‌

ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ಡ್ರೋಣ್ ಕ್ಯಾಮೆರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು.

ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್‌ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ ಎಂಟು ಅಂಶದ ಕಾರ್ಯಕ್ರಮಕ್ಕೆ ಅಸ್ತು ಎಂದರು.‌

  • ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶಗಳನ್ನು ಗುರುತಿಸುವುದು ಮತ್ತೆ ಯಾವ ಸ್ವರೂಪದ ಸಂಘರ್ಷ ಇದೇ ಎಂದು ಪಟ್ಟಿ ಮಾಡುವುದು.
  • ಮಾನವ ಸಂಪನ್ಮೂಲದ ನಿರ್ವಹಣೆ ಸಂಘರ್ಷದ ತೀವ್ರತೆಯ ಆಧಾರದ ಮೇಲೆ ಅಧಿಕಾರಿ, ಸಿಬ್ಬಂದಿಯ ನಿಯೋಜನೆ.
  • ಗಸ್ತು: ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಮಾಡುವುದು ಹಾಗೂ ರಿಜಿಸ್ಟರ್ ನಿರ್ವಹಣೆ.
  • ಹಿರಿಯ ಅಧಿಕಾರಿಗಳು ನಿಯಮಿತವಾಗಿ ಅರಣ್ಯದಂಚಿನ, ಅದರಲ್ಲೂ ಮಾನವ ವನ್ಯಜೀವಿ ಸಂಘರ್ಷ ಇರುವ ಗ್ರಾಮದಲ್ಲಿ ವಾಸ್ತವ್ಯ ಮಾಡುವುದು.
  • ಸ್ಥಳೀಯರನ್ನು ತೊಡಗಿಸಿಕೊಳ್ಳುವುದು, ಅರಣ್ಯದಂಚಿನ ಗ್ರಾಮದ ಉತ್ಸಾಹಿ ಯುವಕರು ಮತ್ತು ಹಿರಿಯರನ್ನು ಗುರುತಿಸಿ ಅರಣ್ಯ ಮಿತ್ರ ಎಂದು ಪರಿಗಣಿಸಿ ಗಸ್ತು, ವನ್ಯಜೀವಿ, ಸೆರೆ, ಕಾರ್ಯಾಚರಣೆ ವೇಳೆ ಅವರ ಸೇವೆ ಬಳಸಿಕೊಳ್ಳುವುದು.
  • ವನ್ಯಜೀವಿ ಸಂರಕ್ಷಣೆ ಕಾರ್ಯಾಚರಣೆಗೆ ವನ್ಯಜೀವಿಗಳು ಸಂಚರಿಸುವ ಕಾರ್ಯತಂತ್ರ ಸ್ಥಳಗಳಲ್ಲಿ 24/7 ವಾಹನ ಮತ್ತು ಅರಣ್ಯ ಸಿಬ್ಬಂದಿ ಲಭ್ಯವಾಗುವಂತೆ ಮಾಡುವುದು.
  • ಅಣಕು ಪ್ರದರ್ಶನ: ವನ್ಯಜೀವಿ ಸೆರೆ, ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸುವುದು.
  • ಜಿಲ್ಲಾ ಮಟ್ಟದಲ್ಲಿ ಸಮನ್ವಯ/ ಸಹಯೋಗ ಸಮಿತಿ ರಚನೆ: ತಾಲೂಕು ಮಟ್ಟದಲ್ಲಿ ಉಪಸಮಿತಿ ರಚನೆ ಮಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೆರವು ಪಡೆಯುವುದು
Previous articleRCB: ಗೆದ್ದಿದ್ದು ಟ್ರೋಫಿ, ಕಳೆದುಕೊಂಡಿದ್ದು ತವರು ಕೋಟೆ: ಬೆಂಗಳೂರು ಬಿಟ್ಟು ಪುಣೆಗೆ ಹೊರಟಿತೇ RCB?
Next articleಹಿಂಸಾರೂಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಹೋರಾಟ: 50ಕ್ಕೂ ಅಧಿಕ ಟ್ರ್ಯಾಕ್ಟರ್‌ಗಳಿಗೆ ಬೆಂಕಿ…!

LEAVE A REPLY

Please enter your comment!
Please enter your name here