ಬೆಂಗಳೂರು: ನಮ್ಮಲ್ಲಿ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಾಗಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 140 ಶಾಸಕರು ಹಾಗೂ 40 ಪರಿಷತ್ ಸದಸ್ಯರಿದ್ದು, ಆ ಪೈಕಿ ನಾವು ಸಚಿವ ಸ್ಥಾನ ನೀಡಲು ಸಾಧ್ಯವಿರುವುದು ಕೇವಲ 33 ಜನರಿಗೆ ಮಾತ್ರ. ನಮ್ಮ ಪಕ್ಷದಲ್ಲಿ ಎಲ್ಲರೂ ಅರ್ಹರಿದ್ದಾರೆ ಎಂದರು.
ಇನ್ನು ಕಾಂಗ್ರೆಸ್ ಹಿರಿಯ ನಾಯಕರ ಮನೆಗೆ ಭೇಟಿ ನೀಡಿದ್ದು ಸಮಸ್ಯೆ ಬಗೆಹರಿಸಲಾಗಿದೆಯೇ ಎಂಬ ಪ್ರಶ್ನೆಗೆ, “ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆ ಇರುವುದು ಮಾಧ್ಯಮಗಳಲ್ಲಿ. ನಮ್ಮ ಹಿರಿಯ ನಾಯಕರ ಭಾವನೆಗೆ ನಾವು ಗೌರವ ಸಲ್ಲಿಸಬೇಕು” ಎಂದರು.
“ಶಾಸಕರ ಆಸೆ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಪ್ರಾಮಾಣಿಕರಾಗಿದ್ದು, ಎಲ್ಲರೂ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ” ಎಂದು ತಿಳಿಸಿದರು.





















