ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಶೀಘ್ರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನ ಪ್ರಕರಣದ ಕುರಿತು ಸತ್ಯಾಸತ್ಯತೆ ತಿಳಿದುಕೊಳ್ಳಲು ಹಾಗೂ ಕಾರ್ಯಕರ್ತರಲ್ಲಿರುವ ಗೊಂದಲ ನಿವಾರಣೆಗೆ ಶೀಘ್ರದಲ್ಲೇ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರೊಂದಿಗೆ ಚರ್ಚಿಸಿ ಸಭೆಯ ದಿನಾಂಕ ನಿಗದಿಪಡಿಸಲಾಗುವುದು ಎಂದು ಹೇಳಿದರು. … Continue reading ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಶೀಘ್ರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ