ದಾಖಲೆ ಬರೆಯುತ್ತಿರುವ ಸಿಎಂಗೆ ಡಿ.ಕೆ. ಶಿವಕುಮಾರ ಶುಭ ಹಾರೈಕೆ

0
1

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದೀರ್ಘಾವಧಿ ಆಡಳಿತ ಮಾಡಿದ ದಾಖಲೆ ಬರೆಯುತ್ತಿದ್ದಾರೆ. ಇದು ಬಹಳ ಸಂತೋಷದ ವಿಷಯ. ನಾನು ಸಿಎಂ ಸಿದ್ದರಾಮಯ್ಯನವರಿಗೆ ತುಂಬು ಹೃದಯದಿಂದ ಶುಭ ಹಾರೈಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೀವನದಲ್ಲಿ ಸಾಧನೆ ಮಾಡಬೇಕು ಎಂಬ ಬಯಕೆ ಎಲ್ಲರಿಗೂ ಇರುತ್ತದೆ. ನಮ್ಮ ಗೌರವಾನ್ವಿತ ಮುಖ್ಯಮಂತ್ರಿಗಳು ಇತಿಹಾಸದ ಪುಟಕ್ಕೆ ಹಿಂದೆಯೂ ಸೇರಿದ್ದಾರೆ, ಮುಂದೆಯೂ ಸೇರುತ್ತಾರೆ ಎಂದು ಹೇಳಿದರು. ಇದರಿಂದ ನಿಮ್ಮ ಹಾದಿ ಸುಗಮವಾಗುತ್ತದೆಯೇ ಎಂದು ಕೇಳಿದಾಗ, ಹಳ್ಳಿಯಿಂದ ಬಂದ ನಾನು ಇಲ್ಲಿಯವರೆಗೂ ತಲುಪಿದ್ದೇನೆ. ಇದಕ್ಕಿಂತ ಇನ್ನೇನು ಬೇಕು ನನಗೆ. ಯಾವುದನ್ನೂ ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ. ನನ್ನ ಬಾಯಲ್ಲಿ ಏನೇನೋ ಮಾತನಾಡಿಸಲು ಪ್ರಯತ್ನಿಸಬೇಡಿ ಎಂದರು.

ಇದನ್ನೂ ಓದಿ: ಅರಸು ದಾಖಲೆ ಮುರಿಯುತ್ತಿರುವ ಸಿದ್ದರಾಮಯ್ಯ ಏಕೆ ಹೀಗಂದ್ರು?

ಶುಭ ದಿನಗಳು ಬರುತ್ತಿವೆ ಎಂಬ ಡಿ.ಕೆ. ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನಮಗೆ ಎಲ್ಲಾ ದಿನವೂ ಒಳ್ಳೆಯ ದಿನಗಳು, ನಿನ್ನೆ ಭೂತಕಾಲ, ನಾಳೆ ಭವಿಷ್ಯಕಾಲ, ಇಂದು ವರ್ತಮಾನ. ನಿಮ್ಮ ಜೊತೆ ಮಾತನಾಡುತ್ತಿರುವುದು ಒಳ್ಳೆಯ ದಿನ ಎಂದು ಚಟಾಕಿ ಹಾರಿಸಿದರು.

Previous articleಸಿದ್ದರಾಮಯ್ಯ ಕಾಂಗ್ರೆಸ್‌ನ ಲಾಸ್ಟ್ ಸಿಎಂ