ದಸರಾ 2025: ಬೆಂಗಳೂರು-ಕರಾವಳಿ, ಬೆಂಗಳೂರು-ಬೀದರ್ ವಿಶೇಷ ರೈಲು

0
51

ದಸರಾ 2025ರ ಹಿನ್ನಲೆಯಲ್ಲಿ ನೈಋತ್ಯ ರೈಲ್ವೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಮಾಡಿದೆ. ಬೆಂಗಳೂರು ನಗರದಿಂದ ಕರ್ನಾಟಕದ ಕರಾವಳಿ ಮೂಲಕ ಮಡಗಾಂವ್ ಮತ್ತು ಬೆಂಗಳೂರು ಬೀದರ್ ನಡುವೆ ಈ ರೈಲು ಸಂಚಾರವನ್ನು ನಡೆಸಲಿದೆ.

ಈ ಕುರಿತು ನೈಋತ್ಯ ರೈಲ್ವೆ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಪ್ರಮುಖ ಹಬ್ಬಗಳಲ್ಲಿ ಒಂದಾದ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಒಂದು ಟ್ರಿಪ್ ಈ ವಿಶೇಷ ರೈಲುಗಳನ್ನು ಓಡಿಸಲಿದೆ ಎಂದು ಹೇಳಿದೆ.

ರೈಲುಗಳ ವಿವರ

  • ರೈಲು ಸಂಖ್ಯೆ 06249/ 06250 ಯಶವಂತಪುರ-ಮಡಗಾಂವ್-ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು (1 ಟ್ರಿಪ್). ರೈಲು ಸಂಖ್ಯೆ 06249 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 30ರಂದು ಮಧ್ಯಾಹ್ನ 12:00 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 05:30 ಗಂಟೆಗೆ ಮಡಗಾಂವ್ ತಲುಪಲಿದೆ. ಮರಳುವಾಗ ರೈಲು ಸಂಖ್ಯೆ 06250 ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 1ರಂದು ಬೆಳಿಗ್ಗೆ 06:30 ಗಂಟೆಗೆ ಮಡಗಾಂವ್‌ನಿಂದ ಹೊರಟು, ಅದೇ ದಿನ ರಾತ್ರಿ 11:40 ಗಂಟೆಗೆ ಯಶವಂತಪುರ ತಲುಪಲಿದೆ.

ಈ ರೈಲು 16 ಬೋಗಿಗಳನ್ನು (10 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಮತ್ತು 2 ಎಸ್‌ಎಲ್‌ಆರ್/ಡಿ ಬೋಗಿಗಳು) ಒಳಗೊಂಡಿರಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

  • ರೈಲು ಸಂಖ್ಯೆ 06291/ 06292 ಎಸ್‌ಎಂವಿಟಿ ಬೆಂಗಳೂರು-ಬೀದರ್‌-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ವಿಶೇಷ ರೈಲು (1 ಟ್ರಿಪ್).
  • ರೈಲು ಸಂಖ್ಯೆ 06291 ಎಸ್‌ಎಂಐಟಿ ಬೆಂಗಳೂರು-ಬೀದರ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೆಪ್ಟೆಂಬರ್ 30ರಂದು ರಾತ್ರಿ 09:15 ಗಂಟೆಗೆ ಎಸ್‌ಎಂಐಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 11:30 ಗಂಟೆಗೆ ಬೀದರ್ ತಲುಪಲಿದೆ.
  • ರೈಲು ಸಂಖ್ಯೆ 06292 ಬೀದರ್-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 1ರಂದು ಮಧ್ಯಾಹ್ನ 01:00 ಗಂಟೆಗೆ ಬೀದರ್‌ನಿಂದ ಹೊರಟು, ಮರುದಿನ ಬೆಳಿಗ್ಗೆ 04:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲು 22 ಬೋಗಿಗಳನ್ನು (20 ಸ್ಲೀಪರ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್/ಡಿ ಬೋಗಿಗಳು) ಒಳಗೊಂಡಿರಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್‌, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ ಮತ್ತು ಹುಮನಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

Previous articleಸಿ.ಪಿ. ರಾಧಾಕೃಷ್ಣನ್ ದೇಶದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ
Next articleದಾಂಡೇಲಿ: ಗೋಕರ್ಣ ಹಾಲಕ್ಕಿ ಹೆರಿಟೇಜ್ ವಾಕ್ – ವಿಶಿಷ್ಠ ಸಮುದಾಯ ಆಧಾರಿತ ಪ್ರವಾಸೋದ್ಯಮಕ್ಕೆ ಚಾಲನೆ

LEAVE A REPLY

Please enter your comment!
Please enter your name here