ಬೆಂಗಳೂರು: “ನನ್ನ ಹುಟ್ಟುಹಬ್ಬಕ್ಕೆ ಯಾರೂ ಪ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಹಾಕುವಂತಿಲ್ಲ, ಒಂದು ವೇಳೆ ಹಾಕಿದರೆ ಅವರ ವಿರುದ್ಧ ಪಾಲಿಕೆಯಿಂದ ಕ್ರಮ ಜರುಗಿಸಲು ಸೂಚಿಸುತ್ತೇನೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವಶ್ಯವಿದ್ದಲ್ಲಿ ಹಣ ಪಾವತಿಸಿ ಜಾಹೀರಾತು ಕೊಡಬಹುದು. ವಿನಾಕಾರಣ ರಸ್ತೆಯಲ್ಲಿ ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕಿ ನಗರ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಹೇಳಿದ್ದಾರೆ.
ಅನಧಿಕೃತವಾಗಿ ರಸ್ತೆಯಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕಿದರೆ ಅಂತವರ ವಿರುದ್ಧ ಕ್ರಮಕ್ಕೆ, ದಂಡ ವಿಧಿಸಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಇದು ಎಲ್ಲರಿಗೂ ನಾನು ಕೊಡುವ ಸೂಚನೆ ಎಂದು ಹೇಳಿದ್ದಾರೆ.
1962ರಲ್ಲಿ ಜನಿಸಿರುವ ಡಿ.ಕೆ.ಶಿವಕುಮಾರ ಅವರು ಮೇ 15ರಂದು ತಮ್ಮ 64ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ಈ ವೇಳೆ ಅಭಿಮಾನಿಗಳಿಗೆ ಫ್ಲೆಕ್ಸ್, ಬ್ಯಾನರ್ ಹಾಖಿ ನಗರ ಸೌಂದರ್ಯವನ್ನು ಹಾಳುಮಾಡಬೇಡಿ ಎಂದು ಹೇಳಿದ್ದಾರೆ.





















