Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿಲ್ಲ

ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿಲ್ಲ

0
27

ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿಲ್ಲ. ಇದನ್ನು ತಪಾಸಣೆಗೆ ಒಳಪಡಿಸಿದಾಗ ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶ ಇಲ್ಲ ಎಂದು ವರದಿ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಮೊಟ್ಟೆಯನ್ನು ಸಂಗ್ರಹಿಸಿ, ಲ್ಯಾಬ್‌ಗೆ ರವಾನೆ ಮಾಡಲಾಗಿತ್ತು. ಇದೀಗ ವರದಿ ಬಂದಿದ್ದು, ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್‌ಕಾರಕ ಅಂಶವಿಲ್ಲ. ಮೊಟ್ಟೆ ಸೇಫ್ ಇದೆ ಎಂದು ವಿವರಿಸಿದರು.

ಸುಳ್ಳು ಸುದ್ದಿ ಹರಡುವ ಮೂಲಕ ಜನರನ್ನು ಆತಂಕಕ್ಕೆ ಸಿಲುಕಿಸಿದ್ದಾರೆ. ಮೊಟ್ಟೆಯನ್ನು ಸೇವನೆ ಮಾಡಬಹುದು. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಎಫ್‌ಎಸ್‌ಎಸ್‌ಎಐ ಹೇಳಿದೆ, ಸುಮ್ಮನೇ ಆತಂಕ ಬೇಡ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿನಯ್ ಕುಲಕರ್ಣಿಗೆ ಮತ್ತೆ ಶಾಕ್; ವಿಚಾರಣೆ 2026ಕ್ಕೆ ಮುಂದೂಡಿಕೆ

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸೇವೆ ಕಡಿತ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಲ್ಲೆಲ್ಲಿ ಕಡಿಮೆ ರೋಗಿಗಳು ಬರುತ್ತಾರೊ, ಅಲ್ಲಿನ ವೈದ್ಯರನ್ನು ಶಿಫ್ಟ್ ಮಾಡುತ್ತೇವೆ. ಸ್ಪೆಷಲಿಸ್ಟ್‌ಗಳನ್ನು ಶಿಫ್ಟ್ ಮಾಡಿ, ಇಬ್ಬರು ಎಂಬಿಬಿಎಸ್ ವೈದ್ಯರನ್ನ ಹಾಕುತ್ತೇವೆ ಎಂದು ವಿವರಿಸಿದರು.

ಯಾವ ಸಮುದಾಯ ಕೇಂದ್ರಗಳನ್ನು ಮುಚ್ಚಲ್ಲ. ಸ್ಪೆಷಲಿಸ್ಟ್ ವೈದ್ಯರನ್ನ ಶಿಫ್ಟ್ ಮಾಡಿದ ಬಳಿಕ ಇಬ್ಬರು ಎಂಬಿಬಿಎಸ್ ಡಾಕ್ಟರ್ ಅನ್ನು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹಾಕುತ್ತೇವೆ. ಸಮುದಾಯ ಕೇಂದ್ರಗಳು 24 ಗಂಟೆ ಸೇವೆ ನೀಡುತ್ತವೆ ಎಂದು ಸ್ಪಷ್ಟನೆ ನೀಡಿದ್ದಾರೆ.

Previous articleಮಾನ್ಯಾ ಹತ್ಯೆ ಪ್ರಕರಣ: ಕರ್ತವ್ಯ ಲೋಪ, ಪಿಡಿಒ ಅಮಾನತು
Next articleIND-W vs SL-W: ಭಾರತಕ್ಕೆ ಹ್ಯಾಟ್ರಿಕ್‌ ಗೆಲುವು, ಕೈ ಸೇರಿದ ಟಿ20 ಸರಣಿ