Home ನಮ್ಮ ಜಿಲ್ಲೆ ಬೆಂಗಳೂರು ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ನಿಧನ

ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ನಿಧನ

0

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್(67) ಸೋಮವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾದರು. ತಕ್ಷಣವೇ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ.

ಎಸ್.ಎಂ.ಕೃಷ್ಣಾ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ
2004 ರಿಂದ 2008ರವರೆಗೆ ಶಾಸಕರಾಗಿದ್ದರು. ಕೆಎಸ್ ಆರ್ ಟಿಸಿ ಅಧ್ಯಕ್ಷರಾಗಿ. ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದೇವರಾಜ್ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು.

ಮೃತರ ಪಾರ್ಥಿವ ಶರೀರವನ್ನು ರಾತ್ರಿಯೇ ಬೆಂಗಳೂರಿಗೆ ತರಲಾಯಿತು.
ದೇವರಾಜ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version