Home Advertisement
Home ನಮ್ಮ ಜಿಲ್ಲೆ ಬೆಂಗಳೂರು ನಾನೂ ಮುಖ್ಯಮಂತ್ರಿ ಸ್ಥಾನಕ್ಕೆ ಸಮರ್ಥ

ನಾನೂ ಮುಖ್ಯಮಂತ್ರಿ ಸ್ಥಾನಕ್ಕೆ ಸಮರ್ಥ

0
3

ಬೆಂಗಳೂರು: ನಾನೂ ಮುಖ್ಯಮಂತ್ರಿ ಸ್ಥಾನಕ್ಕೆ ಸಮರ್ಥನಿದ್ದೇನೆ. ಪಕ್ಷವು ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತುಪಡಿಸಿದ್ದೇನೆ ಎಂದು ಹೇಳುವ ಮೂಲಕ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು, ಮತ್ತೇ ಕುರ್ಚಿ ಚರ್ಚೆಗೆ ಧುಮುಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಗ್ಗೆಯಾಗಲಿ ಅಥವಾ ಬದಲಾವಣೆಯ ಕುರಿತು ಹಾದಿ ಬೀದೀಲಿ ಚರ್ಚಿಸಲು ಸಾಧ್ಯವಿಲ್ಲ. ಹೆಚ್ಚೆಂದರೆ ಪಕ್ಷದ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡಬಹುದು. ಉಳಿದಂತೆ ಹೈಕಮಾಂಡ್ ನಾಯಕರು ನಾಲ್ಕು ಗೋಡೆಗಳ ನಡುವೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್‌ ದಲಿತ ಸಿಎಂ ಮಾಡೋದು ಅಸಾಧ್ಯ

ನನ್ನ ಹೆಸರನ್ನು ಯಾರೋ ಕೂಗಿದ ತಕ್ಷಣ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಹಾಗೆ ಕೂಗುವುದನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ. ನನ್ನ ಸಾಮರ್ಥ್ಯವನ್ನು ಎಷ್ಟು ಬಾರಿ ಸಾಬೀತುಪಡಿಸಬೇಕು. ಕೆಪಿಸಿಸಿ ಅಧ್ಯಕ್ಷನಾಗಿ ಎಂಟು ವರ್ಷ ಕೆಲಸ ಮಾಡಿದ್ದೇನೆ. ಎರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ ಎಂದರು.

ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಾಮರ್ಥ್ಯ ಇಲ್ಲದಿದ್ದರೆ ಉಪಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿತ್ತೇ, ಸಾಮರ್ಥ್ಯದ ಬಗ್ಗೆ ಯಾರು ಪ್ರಶ್ನೆ ಮಾಡುವಂತಿಲ್ಲ. ನಾನು ಹಲವಾರು ಬಾರಿ ಸಾಬೀತುಪಡಿಸಿದ್ದೇನೆ. ಆದರೆ ಸನ್ನಿವೇಶ ಮತ್ತು ಪಕ್ಷದ ತೀರ್ಮಾನ ಎಲ್ಲವನ್ನೂ ಆಧರಿಸಿರುತ್ತದೆ ಎಂದರು.

Previous articleಶಿರಸಿ ಮಾರಿಕಾಂಬೆಯ ವೈಭವಯುತ ರಥೋತ್ಸವ