Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ ಗಾಂಧೀಜಿ

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ ಗಾಂಧೀಜಿ

0
3

ಬೆಂಗಳೂರು: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಹಾತ್ಮಾ ಗಾಂಧೀಜಿಯವರ ಹುತಾತ್ಮ ದಿನಾಚರಣೆ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಹಾತ್ಮಾ ಗಾಂಧಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ. ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ. 80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸ್ವಾವಲಂಬಿಯಾಗಬೇಕು. ಗ್ರಾಮಗಳ ಪ್ರಗತಿಯಲ್ಲಿಯೇ ದೇಶದ ಪ್ರಗತಿ ಅಡಗಿದೆ ಎಂದು ಅವರು ನುಡಿದಿದ್ದರು ಎಂದು ತಿಳಿಸಿದರು.

ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ಹೆಸರು: ರಾಜ್ಯದಲ್ಲಿ ಸುಮಾರು 6 ಸಾವಿರ ಪಂಚಾಯ್ತಿಗಳಿವೆ. ಅವುಗಳಿಗೆ ಮಹಾತ್ಮಾ ಗಾಂಧಿಯವರ ಹೆಸರು ಇಡಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ. ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದರು. ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿಯಿಂದ ಅಲ್ಲ ಎಂಬುದನ್ನು ಪ್ರತಿಪಾದಿಸಿದ್ದುದಾಗಿ ತಿಳಿಸಿದರು.

ಗಾಂಧಿ ಕೊಡುಗೆಯನ್ನು ಇಡೀ ದೇಶ ಸ್ಮರಿಸುತ್ತದೆ: ಇಂತಹ ಮಹಾನ್ ಚೇತನ ಗುಂಡೇಟಿಗೆ ಬಲಿಯಾಗಿ ನಮ್ಮನ್ನ ಅಗಲಿದ್ದಾರೆ. ಅವರ ಅಭಿಮಾನಿಯೊಬ್ಬರು- ಗಾಂಧೀಜಿಯವರು 100 ವರ್ಷ ಬದುಕಬೇಕೆಂದು ಹಾರೈಸಿದ್ದಕ್ಕೆ, ಗಾಂಧೀಜಿಯವರು ‘ನಾನು 125 ವರ್ಷಗಳು ದೇಶಕ್ಕಾಗಿ ಬದುಕಲಿಚ್ಛಿಸುತ್ತೇನೆ’ ಎಂದು ಉತ್ತರಿಸಿದ್ದರು. ಇಡೀ ದೇಶ ಅವರ ಕೊಡುಗೆಯನ್ನು ಸ್ಮರಿಸುತ್ತದೆ ಎಂದರು.

ಬಾಕಿ ಬಿಲ್ಲುಗಳು ಹಿಂದಿನ ಬಿಜೆಪಿ ಸರ್ಕಾರದ್ದು: ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಹಿಂದಿನ ಬಿಜೆಪಿ ಸರ್ಕಾರದವರು ಬಾಕಿ ಬಿಲ್ಲುಗಳನ್ನು ಪಾವತಿಸದೇ ಬಿಟ್ಟು ಹೋಗಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Previous articleನಿರ್ಮಾಪಕರಾದ ʻಪ್ರಜ್ವಲ್‌ ದೇವರಾಜ್‌ʼ: ಸಹೋದರ ಪ್ರಣಾಮ್ ನಟನೆಯ ‘MGR’ ಫಸ್ಟ್ ಲುಕ್ ರಿಲೀಸ್!
Next articleವಿದೇಶದಲ್ಲಿ ಗಾಂಧೀಜಿ ಕೊಂಡಾಟ, ದೇಶದಲ್ಲಿ ಅಪಚಾರ: ಇದು ಮೋದಿ ಅವರ ಹಿಪೊಕ್ರೆಸಿ