ಬೆಂಗಳೂರು: ಮಹಿಳೆಯರ ಆರೋಗ್ಯ ಹಾಗೂ ಕಾರ್ಯ ಕ್ಷಮತೆಯನ್ನು ಗಮನದಲ್ಲಿಟ್ಟು ಕೊಂಡ ಸರ್ಕಾರವು ಖಾಸಗಿ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ `ಋತುಚಕ್ರ ರಜಾನೀತಿ’ಯನ್ನು ಜಾರಿಗೊಳಿಸಿದೆ.
ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿ ಆಗಿರುವ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಮಾಸಿಕವಾಗಿ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡುವಂತೆ ಸರ್ಕಾರ ರಾಜ್ಯ ಪತ್ರ ಹೊರಡಿಸಿದೆ.
ಆದೇಶ ಹೊರಡಿಸುವುದಕ್ಕೂ ಮುನ್ನ ತಜ್ಞರ ಸಮಿತಿಯೊಂದನ್ನು ರಚಿಸಿ ಅಭಿಪ್ರಾಯ ಸಂಗ್ರಹಿಸಿತ್ತು. ಈ ಪೈಕಿ ಒಟ್ಟು 75 ಅಭಿಪ್ರಾಯಗಳಲ್ಲಿ ಸ್ವೀಕೃತವಾಗಿದ್ದು, ಈ ಪೈಕಿ 56 ಅಭಿಪ್ರಾಯ ರಜಾನೀತಿಯ ಪರವಾಗಿದ್ದವು.
